ಮಡಿಕೇರಿ, ಜು. 24: ಉದ್ಯೋಗಿನಿ ಯೋಜನೆಯಡಿ 2017-18ನೇ ಸಾಲಿನಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಗುರಿ ನಿಗದಿಪಡಿಸಲಾಗಿದ್ದು, ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು 18 ರಿಂದ 45 ವರ್ಷದವರೆಗಿನ ವಾರ್ಷಿಕ ಆದಾಯ ರೂ. 40 ಸಾವಿರ ಒಳಪಟ್ಟ ಮಹಿಳೆಯರಿಗೆ ಅವಕಾಶವಿದೆ.

ಉದ್ಯೋಗಿನಿ ಯೋಜನೆಯ ಅರ್ಜಿಗಳನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಸೋಮವಾರಪೇಟೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿ ಗಳನ್ನು ಸೂಕ್ತ ದಾಖಲಾತಿ ಗಳೊಂದಿಗೆ ಆಗಸ್ಟ್ 21 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ಫಾರಂಗಳಿಗೆ ಶಿಶು ಅಭಿವೃದ್ಧಿ ಯೋಜನೆ ಸೋಮವಾರಪೇಟೆ ದೂರವಾಣಿ ಸಂಖ್ಯೆ: 08276-282281 ಇವರನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.