ಮಡಿಕೇರಿ, ಜು. 25: ಗಣಕಯಂತ್ರ ಶಿಕ್ಷಣ ಪರೀಕ್ಷೆಯು ತಾ. 29 ರವರೆಗೆ ನಗರದ ಶ್ರೀನಿಕೇತನ ಶ್ರೀಸದ್ಗುರು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವದೇ ನಿಯಮಬಾಹಿರ ಚಟುವಟಿಕೆ ಹಾಗೂ ಯಾವದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ, ಅಲ್ಲದೆ ಈ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮತ್ತು ಸೈಬರ್ ಕೆಫೆಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರಾದ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಆದೇಶ ಹೊರಡಿಸಿದ್ದಾರೆ.