ಮಡಿಕೇರಿ, ಜು. 25: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಬ್ಯಾರಿ-ಕನ್ನಡ-ಇಂಗ್ಲೀಷ್ ನಿಘಂಟು ರಚನೆಗೊಂಡಿದ್ದು, ಇದರ ಲೋಕಾರ್ಪಣೆ ತಾ. 31 ರಂದು ಮಂಗಳೂರು ಪುರಭವನದಲ್ಲಿ ನಡೆಯಲಿದೆ.

ಅಕಾಡೆಮಿ ಅಧ್ಯಕ್ಷ ಬಿ.ಎ. ಮೊಹಮದ್ ಹನೀಫ್ ಅವರು ಅಧ್ಯಕ್ಷತೆ ವಹಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ನಿಘಂಟನ್ನು ಲೋಕಾರ್ಪಣೆ ಗೊಳಿಸಲಿದ್ದಾರೆ. ಪ್ರಾಧ್ಯಾಪಕ ಡಾ. ಅರವಿಂದ ಮಾಲಗಿತ್ತಿ ಅವರು ಸಮಾರಂಭ ಉದ್ಘಾಟಿಸಲಿದ್ದಾರೆ. ಮಾಜಿ ಶಿಕ್ಷಣ ಸಚಿವ ಬಿ.ಎ. ಮೊೈದೀನ್, ರಾಜ್ಯ ಆಹಾರ ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಜೆ.ಆರ್. ಲೋಬೋ, ಕ್ಯಾ. ಗಣೇಶ್ ಕಾರ್ಣಿಕ್ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.