ಕೂಡಿಗೆ, ಜು. 25: ಇಂದಿನ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮುಂದಿನ ಸಾಮಾಜಿಕ ಕೌಶಲ್ಯವನ್ನು ಹೆಚ್ಚಿಸಲು ಶಿಕ್ಷಕರಿಗೂ ತರಬೇತಿಗಳು ಮುಖ್ಯವಾಗಿರುತ್ತದೆ ಎಂದು ಜಿಲ್ಲಾ ಹಿಂದುಳಿದ ವರ್ಗದ ಜಿಲ್ಲಾ ಅಧಿಕಾರಿ ಕೆ.ವಿ ಸುರೇಶ್ ಹೇಳಿದರು.

ಕೂಡಿಗೆಯ ಮೊರಾರ್ಜಿ ವಸತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಸಂವಹನ ಕೌಶಲ್ಯ ಮತ್ತು ತರಗತಿ ನಿರ್ವಹಣೆ ತರಭೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ಸ್ವತಃ ಸಂಪನ್ಮೂಲ ವ್ಯಕ್ತಿಗಳಾಗಲು ಹೆಚ್ಚು ತರಬೇತಿ ಪಡೆಯುವದರ ಮೂಲಕ ತನ್ನ ಶಿಕ್ಷಣದ ಮಟ್ಟವನ್ನು ಹೆಚ್ಚಿಸಿಕೊಂಡಾಗ ಮಕ್ಕಳಿಗೆ ಆಂತರಿಕ ಬೋಧನೆಗೆ ಅನುಕೂಲವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಉಪನಿರ್ದೇಶಕರಾದ ಮಾಯಾದೇವಿ ಗಲಿಗಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೂಡಿಗೆ ಮುರಾರ್ಜಿ ಶಾಲೆ ಪ್ರಾಂಶುಪಾಲ ಪ್ರಕಾಶ್, ಏಕಲವ್ಯ ಶಾಲೆಯ ಪ್ರಾಂಶುಪಾಲ ನರಸಿಂಹ, ತರಭೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ ಸಂಗೀತಾ ಮತ್ತು ಅನಿತಾ ಇದ್ದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಪ್ರಕಾಶ್, ಸಹಶಿಕ್ಷಕ ನಾಗೇಶ್ ಕಾರ್ಯಕ್ರಮ ನಿರ್ವಹಿಸಿದರು.