*ಗೋಣಿಕೊಪ್ಪಲು, ಜು. 25: ಸಾರ್ವಜನಿಕ ಶೌಚಾಲಯ ಕಟ್ಟಡ ಕಾಮಗಾರಿಗೆ ಶಾಸಕ ಕೆ.ಜಿ. ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು.ಜಿ. ಪಂ. ಸದಸ್ಯ ಸಿ.ಕೆ. ಬೋಪಣ್ಣ ಅನುದಾನದಲ್ಲಿ ಮಾರ್ಕೆಟ್ ಹಿಂಭಾಗ ಗುರುತಿಸಿದ ಸ್ಥಳದಲ್ಲಿ ಶೌಚಾಲಯ ಕಟ್ಟಡ ಸುಮಾರು ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಜಿ.ಪಂ. ಅನುದಾನ ರೂ. 20 ಲಕ್ಷ ಬಿಡುಗಡೆಯಾಗಿದ್ದು, ರೂ. 15 ಲಕ್ಷ ಶೌಚಾಲಯಕ್ಕೆ ರೂ. 5 ಲಕ್ಷ ಹೈ ಮಾಸ್ಕ್ ದೀಪಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ ಶಾಸಕರು, ಮೂರು ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ ಮಾತನಾಡಿ, ಪಟ್ಟಣದಲ್ಲಿ ಉತ್ತಮ ಸುಸಜ್ಜಿತ ಶೌಚಾಲಯ ವ್ಯವಸ್ಥೆ ಇಲ್ಲ ಇದರಿಂದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಬಹಳ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಜಿ.ಪಂ. ಅನುದಾನವನ್ನು ಶೌಚಾಲಯ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಕುಞಂಗಡ ಅರುಣ್ ಭೀಮಯ್ಯ, ತಾ.ಪಂ. ಉಪಾಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ಗ್ರಾ.ಪಂ. ಅಧ್ಯಕ್ಷೆ ಸೆಲ್ವಿ, ಸದಸ್ಯರುಗಳಾದ ರತಿ ಅಚ್ಚಪ್ಪ, ಮಂಜುಳ, ಸುರೇಶ್ ರೈ, ಪ್ರಭಾವತಿ, ಮಮಿತಾ, ರಾಜಶೇಖರ್, ಕೆ.ಪಿ. ಬೋಪಣ್ಣ, ರಾಮಕೃಷ್ಣ, ಆರ್.ಎಂ.ಸಿ. ಅಧ್ಯಕ್ಷ ಸುವಿನ್ ಗಣಪತಿ, ಸದಸ್ಯ ಕಿಲನ್ ಗಣಪತಿ, ಮಾಜಿ ಗ್ರಾ.ಪಂ. ಸದಸ್ಯರುಗಳಾದ ರಾಜೇಶ್, ಸುರೇಶ್, ಹಾಜರಿದ್ದರು.