ಮಡಿಕೇರಿ, ಜು. 28: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಬೆಟ್ಟಗೇರಿ ಕಾಂಗ್ರೆಸ್ ಕಚೇರಿಯಲ್ಲಿ ಗ್ರಾಮ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಂಯೋಜಕ ತೆನ್ನಿರ ಮೈನಾ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮ ಮಟ್ಟದಲ್ಲಿ ಕಾಂಗ್ರೆಸ್ ಮನೋಭಾವದ ನಾಗರಿಕರನ್ನು ಒಟ್ಟುಗೂಡಿಸುವದು ಸಂಘಟನೆಯ ಮೂಲ ಉದ್ದೇಶ ಎಂದು ತಿಳಿಸಿದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಲಪಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಮಡಿಕೇರಿ, ಜು. 28: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಬೆಟ್ಟಗೇರಿ ಕಾಂಗ್ರೆಸ್ ಕಚೇರಿಯಲ್ಲಿ ಗ್ರಾಮ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಂಯೋಜಕ ತೆನ್ನಿರ ಮೈನಾ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮ ಮಟ್ಟದಲ್ಲಿ ಕಾಂಗ್ರೆಸ್ ಮನೋಭಾವದ ನಾಗರಿಕರನ್ನು ಒಟ್ಟುಗೂಡಿಸುವದು ಸಂಘಟನೆಯ ಮೂಲ ಉದ್ದೇಶ ಎಂದು ತಿಳಿಸಿದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಲಪಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಕಲ್ ರಮಾನಾಥ್ ಅವರ ಸಮ್ಮುಖದಲ್ಲಿ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಪುದಿನೆರವನ ಆಶಾ, ಯುವ ಕಾಂಗ್ರೆಸ್ ವಲಯಾಧ್ಯಕ್ಷರನ್ನಾಗಿ ಬೊಳ್ಳಂಡ ನವೀನ್ ನಾಚಪ್ಪ ಅವರನ್ನು ಆಯ್ಕೆ ಮಾಡಲಾಯಿತು.
ವಲಯ ಕಾಂಗ್ರೆಸ್ ಅಧ್ಯಕ್ಷ ನಾಪಂಡ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಮೀನಾ, ಗ್ರಾ.ಪಂ. ಅಧ್ಯಕ್ಷೆ ಶಾಂತಿ, ಕರ್ತಂಡ ಶೈಲಾ, ಹಿರಿಯ ಕಾಂಗ್ರೆಸ್ ಮುಖಂಡ ನೈಯಣಿರ ಗೋಪಾಲ, ಡಿಸಿಸಿ ಸದಸ್ಯರಾದ ಬಿದ್ದಂಡ ಸುಮಿತಾ ಮಾದಪ್ಪ, ಗ್ರಾ.ಪಂ. ಸದಸ್ಯರಾದ ತೆನ್ನಿರ ರಮೇಶ್, ಸರಸ್ವತಿ, ಮಾಜಿ ವಲಯಾಧ್ಯಕ್ಷ ಕೇಟೊಳಿ ಮೋಹನ್ ರಾಜ್, ಮಾಜಿ ಗ್ರಾ.ಪಂ. ಸದಸ್ಯರಾದ ಬಿದ್ದಂಡ ಮಾದಪ್ಪ, ಬ್ಲಾಕ್ ಕಾಂಗ್ರೆಸ್ ಸದಸ್ಯರಾದ ಪಿ.ಎ. ಮೊಹಮ್ಮದ್ ಕುಂಞ, ಚಳಿಯಂಡ ಚಿನ್ನಪ್ಪ, ಹೆಚ್.ಬಿ. ಸಿದ್ದಯ್ಯ, ಕುಂಜಿಲನ ನಾಗೇಶ್ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.