ಬಿ.ಬಿ. ಭಾರತೀಶ್
ಕೂಡಿಗೆ, ಜು. 28: ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಸ್ತಾರಕ್ ಅಭಿಯಾನದಡಿ ಮನೆ ಮನೆ ಭೇಟಿಯ ಮುಖಾಂತರ ಕೇಂದ್ರ ಸರ್ಕಾರದ ಯೋಜನೆಗಳು ಗ್ರಾಮೀಣ ಜನರಿಗೆ ತಲಪಿಸುವ ಕಾರ್ಯದಿಂದ ಪಕ್ಷದ ಸಂಘಟನೆಗೂ ಸಹಕಾರಿಯಾಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಹೇಳಿದರು.
ಕೂಡುಮಂಗಳೂರು ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಬೂತ್ ಮಟ್ಟದ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಜನಪರ ಯೋಜನೆ ಗಳನ್ನು ಜಾರಿಗೊಳಿಸುತ್ತಿದ್ದು, ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಒಳಿತಾಗುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೂತ್ ಸಮಿತಿಯ ಕೆ.ಡಿ. ಪ್ರಶಾಂತ್ ವಹಿಸಿದ್ದರು. ಈ ಸಂದರ್ಭ ಬಿಜೆಪಿ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಗಣಿಪ್ರಸಾದ್, ಬಿಜೆಪಿ ತಾಲೂಕು ಅಧ್ಯಕ್ಷ ಕುಮಾರಪ್ಪ, ತಾ.ಪಂ. ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳ ಸೇರಿದಂತೆ ಬಿಜೆಪಿಯ ಪ್ರಮುಖರು ಮಾತನಾಡಿದರು.
ಸಭೆಯಲ್ಲಿ ಬಿಜೆಪಿಯ ಬೂತ್ ಸಮಿತಿ ಹಾಗೂ ವಿಸ್ತಾರಕ್ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು, ಬಿಜೆಪಿ ತಾಲೂಕು ಮಹಿಳಾ ಘಟಕದ ಪದಾಧಿಕಾರಿಗಳು, ಕೂಡು ಮಂಗಳೂರು ಮಹಿಳಾ ಬೂತ್ ಸಮಿತಿಯ ಪದಾಧಿಕಾರಿಗಳು ಇದ್ದರು.
ಬೂತ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಸ್ವಾಗತಿಸಿ, ಯುವ ಮೋರ್ಚಾದ ಅಧ್ಯಕ್ಷ ಶಶಿಕಿರಣ್ ವಂದಿಸಿದರು.