ಮಡಿಕೇರಿ, ಜು. 29: ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ಬ್ಯಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಮಡಿಕೇರಿ ನಗರದ ಕ್ರೆಸೆಂಟ್ ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಮಾರಂಭದ ಉದ್ಘಾಟನೆಯನ್ನು ಕೊಡವ ಮತ್ತು ಅರೆಭಾಷಾ ಅಕಾಡೆಮಿಯ ರಿಜಿಸ್ಟ್ರಾರ್ ಉಮರಬ್ಬ ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿಸಿಎಂ ಅಧಿಕಾರಿ ಸುರೇಶ್ ಮಾತನಾಡಿ, ಸರಕಾರ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಬಹಳಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದರು.

ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟ್‍ನ ಅಧ್ಯಕ್ಷ ಬಿ.ಎ. ಷಂಶುದ್ದೀನ್ ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರಿನ ಉದ್ಯಮಿ, ದಾನಿ ಬದ್ರುದ್ದೀನ್, ನಿವೃತ್ತ ಅಧಿಕಾರಿ ಅಮೀರುದ್ದೀನ್, ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಟ್ರಸ್ಟ್‍ನ ಉಪಾಧ್ಯಕ್ಷ ಎಂ.ಬಿ. ನಾಸಿರ್ ಉಪಸ್ಥಿತರಿದ್ದು, ಮಾತನಾಡಿದರು.

ಟ್ರಸ್ಟ್‍ನ ಉಪಾಧ್ಯಕ್ಷ ಮುನೀರ್ ಅಹಮದ್ ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ಎಂ.ಇ. ಮಹಮ್ಮದ್ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಎಂ. ಅಬ್ದುಲ್ಲ ವಂದಿಸಿದರು.