ಮಡಿಕೇರಿ, ಜು. 29: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರೀನ್ ಡಾಟ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಹಾಗೂ ಕೊಡಗು ಜಿಲ್ಲೆಯಲ್ಲಿ ದೊರೆಯುತ್ತಿರುವ ಮಾನಸಿಕ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಮನೋವೈದ್ಯ ಡಾ. ಡೆವಿನ್ ಭಾಗವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗ್ರೀನ್ ಡಾಟ್ ಟ್ರಸ್ಟ್‍ನ ಕಾರ್ಯದರ್ಶಿ ಡಾ. ಸಿ.ಕೆ. ಕಾಂತರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಮಮ್ತಾಜ್ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಪಿ.ಪಿ. ದೇವರಾಜ್ ಪಾಲ್ಗೊಂಡಿದ್ದರು. ಜಿಲ್ಲೆಯ ಎಲ್ಲಾ ಯುಆರ್‍ಡಬ್ಲ್ಯು ಮತ್ತು ಎಂಆರ್‍ಡಬ್ಲ್ಯು ಸದಸ್ಯರುಗಳು ಭಾಗವಹಿಸಿದ್ದರು. ಸಿ.ವಿ. ವಿಶ್ವನಾಥ್ ಇತರರು ಇದ್ದರು.

ಮಾನಸದಾರ ಕೇಂದ್ರದ ಸಂಯೋಜಕ ಡಾ. ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ದೊರೆಯುತ್ತಿರುವ ಮಾನಸಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಡಾ. ಡೆವಿನ್ ಖಿನ್ನತೆಯ ಬಗ್ಗೆ ಮಾತನಾಡಿ ಪ್ರತಿ ದಿನ ಭೇಟಿ ನೀಡುವ ಸ್ಥಳಗಳ ಬಗ್ಗೆ ಮಾಹಿತಿ ನೀಡುವದರ ಜೊತೆಗೆ ಮಾನಸಿಕ ರೋಗಗಳ ಬಗ್ಗೆ ತಿಳಿಸಿದರು.

ಮಾನಸದಾರ ಕೇಂದ್ರದಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾನಸದಾರ ಕೇಂದ್ರದ ಸಂಯೋಜಕ ಸಿ.ವಿ. ವಿಶ್ವನಾಥ್ ಮಾಹಿತಿ ನೀಡಿದರು.