ಕುಶಾಲನಗರ, ಜು. 29: ಆಸಕ್ತಿ, ತಾಳ್ಮೆ ಬೆಳೆಸಿಕೊಂಡಲ್ಲಿ ಗುರಿ ಸಾಧನೆ ಸಾಧ್ಯ ಎಂದು ಶನಿವಾರಸಂತೆ ವಿಘ್ನೇಶ್ವರ ಪಿಯು ಕಾಲೇಜಿನ ಪ್ರಾಂಶುಪಾಲ ಕೆ.ಪಿ. ಜಯಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕುಶಾಲನಗರ ವಿವೇಕಾನಂದ ವಿದ್ಯಾಸಂಸ್ಥೆಯ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಓದುವ ಸಂದರ್ಭ ಸರಳ ಜೀವನ, ಉನ್ನತ ಚಿಂತನೆ ಅಗತ್ಯ.
ಬದುಕು ರೂಪಿಸುವ ಸಂದರ್ಭ ಶ್ರಮದ ಅಗತ್ಯವಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಸಾಧನೆಯ ಛಲ, ಆತ್ಮವಿಶ್ವಾಸ ಹೊಂದಬೇಕೆಂದು ಕರೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಆಡಳಿತಾಧಿಕಾರಿ ನಾಗೇಶ್, ಹಿರಿಯ ವಿದ್ಯಾರ್ಥಿಗಳ ಮಾರ್ಗದರ್ಶನದೊಂದಿಗೆ ಹೊಸ ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿ ಯನ್ನು ನಿಭಾಯಿಸಬೇಕು ಎಂದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎನ್.ಎನ್. ಶಂಭುಲಿಂಗಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಗಿಲ್ ದಿವಸ್ ಅಂಗವಾಗಿ 7 ಮಂದಿ ನಿವೃತ್ತ ಯೋಧರಿಗೆ ಸನ್ಮಾನಿಸಿ, ಗೌರವಿಸಲಾಯಿತು.
ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರು ಹಾಗೂ ನಿವೃತ್ತ ಯೋಧರಾದ ಐಯಣ್ಣ, ಪುಟ್ಟಯ್ಯ, ಆಲ್ಬರ್ಟ್ ಗೋಂಸಾಲ್ವೆಸ್, ಅಬ್ದುಲ್ ರಶೀದ್, ರುಜು ಕುಮಾರ್, ಗುಂಡಣ್ಣ, ಎಂ.ಬಿ. ಉಮೇಶ್, ಸಿದ್ದಾರ್ಥ ಅವರುಗಳನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭ ಕಾರ್ಗಿಲ್ ಯುದ್ದದಲ್ಲಿ ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಲಾಯಿತು.
ಪ್ರಾಂಶುಪಾಲ ಅವಿನಾಶ್ ವಿದ್ಯಾರ್ಥಿಗಳಿಗೆ-ನಾಯಕರುಗಳಿಗೆ ಪ್ರಮಾಣ ವಚನ ಬೋಧಿಸಿದರು. ನಂತರ ವಿದ್ಯಾರ್ಥಿ ಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.