ಕುಶಾಲನಗರ, ಜು. 31: ಸರಕಾರದ ಅನುಮತಿಯಿಲ್ಲದೆ ಅನಧಿಕೃತವಾಗಿ ಖಾಸಗಿ ಪದವಿಪೂರ್ವ ಕಾಲೇಜು ನಡೆಸುತ್ತಿದ್ದ ಅನುಗ್ರಹ ಪಿಯು ಕಾಲೇಜಿನ 98 ವಿದ್ಯಾರ್ಥಿಗಳನ್ನು ಸ್ಥಳೀಯ ಕನ್ನಡ ಭಾರತಿ ಕಾಲೇಜಿಗೆ ಪ್ರವೇಶ ಕಲ್ಪಿಸಲು ಕ್ರಮಕೈಗೊಳ್ಳಲಾಗಿದೆ. ಕುಶಾಲನಗರ ಪಟ್ಟಣದಲ್ಲಿ ಕಳೆದ ಎರಡು ತಿಂಗಳ ಕಾಲ ಇಲಾಖೆಯ ಅನುಮತಿ ದೊರಕದಿದ್ದರೂ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಿ ತರಗತಿ ನಡೆಸುತ್ತಿದ್ದ ಬಗ್ಗೆ ಪದವಿಪೂರ್ವ ಶಿಕ್ಷಣ ಇಲಾಖೆ ಕ್ರಮ ಕೈಗೊಂಡ ಹಿನೆÀ್ನಲೆಯಲ್ಲಿ ಈ ವ್ಯವಸ್ಥೆ ಕೈಗೊಳ್ಳಲಾಗಿದೆ.

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಅನುಮತಿ ದೊರಕದ ಹಿನೆÀ್ನಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರುವದಾಗಿ ಕನ್ನಡ ಭಾರತಿ ಪಿಯು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ. ಅನುಗ್ರಹ ಪಿಯು ಕಾಲೇಜು ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲ ಪಂಡರಿನಾಥ ನಾಯ್ಡು ಅವರ ಕೋರಿಕೆ ಮೇರೆಗೆ ಪ್ರಥಮ ಪಿಯುಸಿಯ

3 ವಿಭಾಗಗಳ 60 ಕ್ಕೂ ಅಧಿಕ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 98 ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಥೆಯಲ್ಲಿ ಪ್ರವೇಶ ಕಲ್ಪಿಸಲಾಗಿದೆ ಎಂದು ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪುರುಷೋತ್ತಮ್ ಮಾಹಿತಿ ನೀಡಿದ್ದಾರೆ. ಈ ಮೂಲಕ ಅತಂತ್ರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ನಿಟ್ಟುಸಿರು ಬಿಡುವಂತಾಗಿದೆ.