ಸೋಮವಾರಪೇಟೆ,ಜು.31: ಕರ್ನಾಟಕ ಜಾನಪದ ಪರಿಷತ್‍ನ ಸೋಮವಾರಪೇಟೆ ಹೋಬಳಿ ಘಟಕದ ನೇತೃತ್ವದಲ್ಲಿ, ಕರ್ನಾಟಕ ರಕ್ಷಣಾ ವೇದಿಕೆಯ ಸಾಹಿತ್ಯ ಘಟಕದ ಸಹಯೋಗದೊಂದಿಗೆ ತಾ. 5ರಂದು ಸ್ಥಳೀಯ ಮಾನಸ ಸಭಾಂಗಣದಲ್ಲಿ ವಿದ್ಯಾರ್ಥಿ ಕವಿಗೋಷ್ಠಿ, ಜಾನಪದ ಗೀತೆ ಗಾಯನ ಸ್ಪರ್ಧೆ ಮತ್ತು ಜಾನಪದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೋಬಳಿ ಘಟಕದ ಅಧ್ಯಕ್ಷ ಎಸ್.ಎ. ಮುರಳೀಧರ್ ತಿಳಿಸಿದ್ದಾರೆ.

ತಾ. 5ರಂದು ಪೂರ್ವಾಹ್ನ 10.30ಕ್ಕೆ ಕಾರ್ಯಕ್ರಮ ಪ್ರಾರಂಭ ವಾಗಲಿದ್ದು, ಸೋಮವಾರಪೇಟೆ ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕವಿಗೋಷ್ಠಿ ಆಯೋಜಿಸಲಾಗಿದೆ. ಪ್ರತಿ ಶಾಲೆಯಿಂದ 5 ಮಂದಿ ವಿದ್ಯಾರ್ಥಿ ಗಳಿಗೆ ಭಾಗವಹಿಸಲು ಅವಕಾಶ ಕಲ್ಪಿಸ ಲಾಗಿದೆ. ಇದರೊಂದಿಗೆ ಸಾರ್ವಜನಿಕ ವಿಭಾಗದಲ್ಲಿ ಜಾನಪದ ಗೀತೆ ಗಾಯನ ಸ್ಪರ್ಧೆ ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗು ವದು ಎಂದು ಮುರಳೀಧರ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಜಾನಪದದ ಬಗ್ಗೆ ಹಿರಿಯ ಉಪನ್ಯಾಸಕರಾದ ಅರಸೀಕೆರೆಯ ಸರ್ವಜ್ಞಮೂರ್ತಿ ಅವರು ಭಾಗವಹಿಸಿ ಉಪನ್ಯಾಸ ನೀಡಲಿದ್ದಾರೆ. ವಿದ್ಯಾರ್ಥಿ ಕವಿಗೋಷ್ಠಿ ಯಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿ ಗಳಿಗೂ ಪ್ರಶಸ್ತಿ ಪತ್ರ ನೀಡಲಾಗುವದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ; 9964618363, 9591316475 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.