ಸುಂಟಿಕೊಪ್ಪ, ಜು. 30: ಮಾದಕ ವಸ್ತುಗಳ ಸೇವನೆಯಿಂದ ಯುವಶಕ್ತಿಗಳ ಭವಿಷ್ಯಕ್ಕೆ ಮಾರಕವಾಗಲಿದ್ದು, ಈ ಬಗ್ಗೆ ಎಚ್ಚರವಹಿಸಬೇಕು ಎಂದು ಸೋಮವಾರಪೇಟೆ ಸಿವಿಲ್ ನ್ಯಾಯಾಧೀಶರಾದ ತಾಲೂಕು ಕಾನೂನು ಸೇವಾಸಮಿತಿ ಅಧ್ಯಕ್ಷ ಪರಶುರಾಮ್ ಎಫ್.ದೊಡ್ಡಮನಿ ಹೇಳಿದರು ಮಾದಾಪುರ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿಪೂರ್ವ ವಸತಿ ಕಾಲೇಜಿನಲ್ಲಿ ಸೋಮವಾರಪೇಟೆ ತಾಲೂಕು ಕಾನೂನು ಪ್ರಾಧಿಕಾರ, ವಕೀಲರ ಸಂಘ ಹಾಗೂ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ಸಹಯೋಗ ಏರ್ಪಡಿಸಲಾಗಿದ್ದ ಮಾದಕ ವಸ್ತು ದುಶ್ಚಟಗಳ ಬಗ್ಗೆ ಜಾಗೃತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಭವ್ಯ ಭಾರತ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಲಿದ್ದು ತಮ್ಮ ಬದುಕನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ದೇಶದ ಭದ್ರತೆಗೆ ಅಳಿಲು ಕಾಣಿಕೆ ಸಲ್ಲಿಸಬಹುದು ಎಂದು ಹೇಳಿದರು.

ಸೋಮವಾರಪೇಟೆ ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಅಧ್ಯಕ್ಷ ಸ್ಥಾನದಿಂದ ಮಾತನಾಡಿ ಭಾರತದ ಭವಿಷ್ಯ ಯುವ ಜನಾಂಗದ ಮೇಲಿದೆ ಸದೃಢ ದೇಶ ನಿರ್ಮಾಣವಾಗಲು ಉತ್ತಮ ಪ್ರಜೆಗಳಾಗಬೇಕು ಎಂದರು.

ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ವೀರೇಂದ್ರ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ದೇವರಾಜು ಅರಸು ಹಿಂದುಳಿದ ವರ್ಗಗಳ ಮತ್ತುಅಲ್ಪಸಂಖ್ಯಾತ ಇಲಾಖೆ ಜಿಲ್ಲಾಧಿಕಾರಿ ಕೆ.ವಿ. ಸುರೇಶ್, ಕುಶಾಲನಗರ ವೃತ್ತನಿರೀಕ್ಷಕ ಕ್ಯಾತೇಗೌಡ ಸೋಮವಾರಪೇಟೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಮೇಗೌಡ, ಸುಂಟಿಕೊಪ್ಪ ಠಾಣಾಧಿಕಾರಿ ಹೆಚ್.ಎಸ್. ಬೋಜಪ್ಪ,, ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ಕಾಲೇಜಿನ ಪ್ರಾಂಶುಪಾಲೆ ನೀತಾ ಹಾಗೂ ಎಂ.ಎಸ್. ಶಂಕರ್ ಉಪಸ್ಥಿತರಿದ್ದರು.