ವೀರಾಜಪೇಟೆ.ಆ.1: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ಸೇವೆಯನ್ನು ಇಂದಿನಿಂದ ರದ್ದುಗೊಳಿಸಿರುವದ ರಿಂದ ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಮುಷ್ಕರ ನಡೆಸಿದರು.

ಪ್ರಥಮ ದರ್ಜೆ ಕಾಲೇಜಿನಲ್ಲಿ ಒಟ್ಟು 35 ಮಂದಿ ಅತಿಥಿ ಉಪನ್ಯಾಸ ಕರು ಕಾರ್ಯ ನಿರ್ವಹಿಸುತ್ತಿದ್ದರು. ಅವರೆಲ್ಲರನ್ನು ವಜಾಗೊಳಿಸಿ ನೂತನವಾಗಿ ಹೊಸ ನೇಮಕಾತಿ ಮಾಡಿಕೊಳ್ಳುವಂತೆ ಸರ್ಕಾರÀ ಆದೇಶಿಸಿದ್ದರಿಂದ ಕಾಲೇಜಿನಲ್ಲಿ ಪ್ರಾಂಶುಪಾಲರು ಹಾಗೂ ಉಳಿದ ಇಬ್ಬರು ಖಾಯಂ ಉಪನ್ಯಾಸಕರನ್ನು ಹೊರತು ಪಡಿಸಿದರೆ ಉಳಿದವರೆಲ್ಲರೂ ಅತಿಥಿ ಉಪನ್ಯಾಸಕ ರಾಗಿದ್ದರು. ಉಪನ್ಯಾಸಕರಿಲ್ಲದೆ ಯಾವ ರೀತಿ ವಿದ್ಯಾಭ್ಯಾಸ ಮಾಡುವದು ಎಂಬುದು ವಿದ್ಯಾರ್ಥಿಗಳ ಅಳಲು. ಉಪನ್ಯಾಸಕ ರನ್ನು ನೇಮಕ ಮಾಡುವÀವರೆಗೆ ತರಗತಿಗಳನ್ನು ಬಹಿಷ್ಕರಿಸಲಾಗುವದು ಎಂದು ವಿದ್ಯಾರ್ಥಿ ನಾಯಕರು ತಿಳಿಸಿದ್ದಾರೆ. ಇಂದು ವಿದ್ಯಾರ್ಥಿಗಳು ಮುಷ್ಕರ ಮುಂದುವರೆಸಿ ತಾಲೂಕು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಿದ್ದಾರೆ. ಕಾಲೇಜಿನಲ್ಲಿ ಸುಮಾರು 700ಮಂದಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು ಅಧಿಕ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ.