ಮಡಿಕೇರಿ, ಆ. 3: ರಾಜ್ಯದ ಪ್ರಭಾವಿ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ ಸೇರಿದಂತೆ ಇನ್ನಿತರೆಡೆಗಳಲ್ಲಿ ನಡೆದಿರುವ ಐಟಿ ಧಾಳಿಯನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಯುವ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.ಮಡಿಕೇರಿ ನಗರದ ಜ. ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ (ಮೊದಲ ಪುಟದಿಂದ) ಕಾರ್ಯಕರ್ತರು ಐಟಿ ಧಾಳಿಯನ್ನು ವಿರೋಧಿಸಿ ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ಷಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮುಂಬರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗುಜರಾತ್ನ ಕಾಂಗ್ರೆಸ್ ಶಾಸಕರು ರಾಜ್ಯಕ್ಕೆ ಪ್ರವಾಸ ಬಂದಿದ್ದು, ಚುನಾವಣೆಯಲ್ಲಿ ಗುಜರಾತ್ನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರ ಐಟಿ ಧಾಳಿ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಜಿಲ್ಲಾ ವಕ್ತಾರ ಕೆ.ಕೆ. ಮಂಜುನಾಥ್ ಕುಮಾರ್, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸದಸ್ಯ ನಂದಕುಮಾರ್, ಪ್ರಕಾಶ್ ಆಚಾರ್ಯ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವಿ.ಪಿ. ಶಶಿಧರ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹನೀಫ್, ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್, ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ, ಪ್ರಮುಖರಾದ ಅಬ್ದುಲ್ ರೆಹಮಾನ್, ಉದಯಕುಮಾರ್, ಮೈನಾ, ಪುಷ್ಪ ಪೂಣಚ್ಚ ಹಾಗೂ ಇನ್ನಿತರರು ಇದ್ದರು.
ವೀರಾಜಪೇಟೆ: ವೀರಾಜಪೇಟೆ ಪಟ್ಟಣದ ಮುಖ್ಯ ರಸ್ತೆಯ ಗಡಿಯಾರ ಕಂಬದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ನರೇಂದ್ರ ಮೋದಿಯ ಕೇಂದ್ರ ಸರ್ಕಾರ ರಾಜಕಿಯ ದುರುದ್ದೇಶದಿಂದ ಐ.ಟಿ. ಇಲಾಖೆಯನ್ನು ದುರಪಯೋಗ ಪಡಿಸಿಕೊಳ್ಳುತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಧಾಳಿ ನಡೆಸಿರುವ ಹಿನ್ನಲೆ ರಾಜಕಿಯ ಪ್ರೇರಿತವಾಗಿದ್ದು ಪ್ರಜಾಪ್ರಭುತ್ವವನ್ನು ಕಗ್ಗೋಲೆ ಮಾಡಿದಂತಾಗುತ್ತಿದೆ ಎಂದು ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘ, ಯುತ್ ಕಾಂಗ್ರೆಸ್, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್, ನಗರ ಸಮಿತಿ, ಮಹಿಳಾ ಕಾಂಗ್ರೆಸ್, ಕಾರ್ಯಕರ್ತರು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ, ಉಪಾಧ್ಯಕ್ಷ ಪಿ.ಎ.ಹನೀಪ್, ಎಂ.ಎಸ್. ಪೂವಯ್ಯ, ಆರ್.ಎಂ.ಸಿ. ಸದಸ್ಯ ಮಾಳೇಟಿರ ಬೋಪಣ್ಣ, ಡಿ.ಕೆ. ಶಿವಕುಮಾರ್ ಅಭಿಮಾನಿ ಸಂಘದ ಚರೀನ್, ರಜಿತ್ ಕುಮಾರ್, ಕೊಟ್ಟಮುಡಿ ಶಾಫಿ, ನಗರ ಕಾಂಗ್ರೆಸ್ ಅಧ್ಯಕ್ಷ ಜಿ.ಜಿ. ಮೋಹನ್, ಎಂ.ಎಲ್. ಸೈನುದ್ಧಿನ್, ಸಿ.ಕೆ. ಪೃಥ್ವಿನಾಥ್, ನಗರ ಮಹಿಳಾ ಕಾಂಗ್ರೆಸ್ನ ಲೈಲಾ ಜೋಸೆಪ್, ಕಾರ್ಯದರ್ಶಿ ಪೂವಮ್ಮ, ಪಟ್ಟಣ ಪಂಚಾಯಿತಿ ಸದಸ್ಯರಾದ ಡಿ.ಪಿ. ರಾಜೇಶ್, ಮಹಮದ್ ರಾಫಿ, ಶಿಬಾ ಪ್ರಥ್ವಿನಾಥ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಶರೀನ್ ಚಂಗಪ್ಪ, ಜಿಲ್ಲಾ ಸಮಿತಿಯ ಗಾಯತ್ರಿ ನರಸಿಂಹ, ಅನಿತ ಮಾಚಯ್ಯ ಮುಂತಾದವರು ಹಾಜರಿದ್ದರು.