ಕುಶಾಲನಗರ, ಆ. 2: ಕುಶಾಲನಗರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸಭೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಂ.ಎಂ. ಚರಣ್ ಅಧ್ಯಕ್ಷತೆಯಲ್ಲಿ ನಡೆಯಿತು.
ಡಿವೈಎಸ್ಪಿ ಸಂಪತ್ ಕುಮಾರ್ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ 71ನೇ ಸ್ವಾತಂತ್ರ್ಯೋತ್ಸವ ಆಚರಣೆ ಸಂಬಂಧ ಉಪಸಮಿತಿಗಳ ಆಯ್ಕೆ ನಡೆಯಿತು. ಸಮಿತಿಯ ಗೌರವಾಧ್ಯಕ್ಷ ರಾಗಿ ಡಿವೈಎಸ್ಪಿ ಸಂಪತ್ ಕುಮಾರ್, ಸಂಚಾಲಕರಾಗಿ ಕುಶಾಲ ನಗರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರ ಮೋಹನ್, ಪ್ರಧಾನ ಕಾರ್ಯದರ್ಶಿ ಯಾಗಿ ಪ್ರೆಸ್ ಕ್ಲಬ್ ಟ್ರಸ್ಟ್ ಅಧ್ಯಕ್ಷ ಹೆಚ್.ಎಂ. ರಘು ಅವರುಗಳನ್ನು ಪುನರಾಯ್ಕೆ ಮಾಡಲು ಸಭೆ ಒಪ್ಪಿಗೆ ನೀಡಿತು. ಸ್ವಾಗತ ಸಮಿತಿ ಸಂಚಾಲಕರಾಗಿ ಉದ್ಯಮಿ ರಾಮದಾಸ್, ಕರ್ನಾಟಕ ಕಾವಲುಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ, ಪಥಸಂಚಲನ ಸಮಿತಿಗೆ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮೊಣ್ಣಪ್ಪ, ದೈಹಿಕ ಶಿಕ್ಷಕ ಉತ್ತಪ್ಪ, ಹಣಕಾಸು ಸಮಿತಿಗೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ. ಶ್ರೀಧರ್, ಸಾಂಸ್ಕøತಿಕ ಸಮಿತಿಗೆ ಉಪನ್ಯಾಸಕರಾದ ಚನ್ನಕೇಶವ, ರಾಜು, ವೇದಿಕೆ ಅಲಂಕಾರ ಸಮಿತಿಗೆ ಜಿಎಂಪಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಕೆ.ಟಿ. ಶ್ರೀನಿವಾಸ್, ಮುಖ್ಯೋಪಾಧ್ಯಾಯರು, ಆಹಾರ ಸಮಿತಿಗೆ ಗೆಳೆಯರ ಬಳಗದ ಅಧ್ಯಕ್ಷ ವಿ.ಎಸ್. ಆನಂದ ಕುಮಾರ್, ಎಂ. ಕೃಷ್ಣ ಅವರುಗಳನ್ನು ನೇಮಕ ಮಾಡಲಾಯಿತು. ಈ ಸಂದರ್ಭ ಕಳೆದ ಸಾಲಿನ ಕಾರ್ಯಕ್ರಮದ ಸಾಧಕ ಬಾಧಕಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಮಾರಂಭದ ಯಶಸ್ಸಿಗೆ ಎಲ್ಲಾ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳ ಪ್ರಮುಖರು ಕೈಜೋಡಿಸುವಂತೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಂ.ಎಂ. ಚರಣ್ ಮನವಿ ಮಾಡಿದರು.
ಈ ಸಂದರ್ಭ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಹೆಚ್.ಡಿ. ಚಂದ್ರು, ಹೆಚ್.ಕೆ. ಪಾರ್ವತಿ, ಸದಸ್ಯರುಗಳಾದ ಡಿ.ಕೆ. ತಿಮ್ಮಪ್ಪ, ಹೆಚ್.ಕೆ. ಕರಿಯಪ್ಪ, ಪ್ರಮೋದ್ ಮುತ್ತಪ್ಪ, ಮಧುಸೂದನ್, ರೇಣುಕಾ, ರಶ್ಮಿ, ಕವಿತಾ, ಲಲಿತಾ, ಸುರಯ್ಯಭಾನು, ನಂಜುಂಡಸ್ವಾಮಿ, ಫಜಲುಲ್ಲಾ, ಶಿವಶಂಕರ್ ಮತ್ತು ಕಂದಾಯ ನಿರೀಕ್ಷಕ ನಂದಕುಮಾರ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಮೃತ್, ವಿವಿಧ ಶಾಲಾ-ಕಾಲೇಜುಗಳ ಶಿಕ್ಷಕರು, ಸಂಘ-ಸಂಸ್ಥೆಗಳ ಪ್ರಮುಖರು ಇದ್ದರು.