ಮಡಿಕೇರಿ, ಆ. 2: ಕಳೆದ 4 ವರ್ಷಗಳಿಂದ ಕೊಡಗು ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಡಾ. ಓ.ಆರ್. ಶ್ರೀರಂಗಪ್ಪ ಮತ್ತು ಆ ಕಚೇರಿ ಯಲ್ಲಿ ಸಹಾಯಕ ಆಡಳಿತಾಧಿಕಾರಿ ಯಾಗಿ ಕಾರ್ಯನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ಅಂಬಿಗೇರ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.

ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಓ.ಆರ್. ಶ್ರೀರಂಗಪ್ಪ, ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಕಾರದಿಂದ ಕೆಲಸ ಮಾಡಿದ್ದೇನೆ.

ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲು ಅವಕಾಶ ಸಿಕ್ಕಿರುವದಕ್ಕೆ ಕೃತಜ್ಞತೆ ಸಲ್ಲಿಸಿದ ಡಾ. ಓ.ಆರ್. ಶ್ರೀರಂಗಪ್ಪ, ಸುಳ್ಯದಲ್ಲಿ ತಾಲೂಕು ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಕಾರಿ ಯಾಯಿತು ಎಂದು ಸ್ಮರಿಸಿದರು.

ಈ ಹಿಂದೆ ಆರ್‍ಸಿಹೆಚ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಪಾರ್ವತಿ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನದಲ್ಲಿ ಯಾವದೇ ರೀತಿಯ ಹಸ್ತಕ್ಷೇಪ ಮಾಡುತ್ತಿರಲಿಲ್ಲ. ಹಲವು ಸಲಹೆ ಮಾರ್ಗದರ್ಶನ ಮೂಲಕ ಕಾರ್ಯಕ್ರಮ ಅನುಷ್ಠಾನಕ್ಕೆ ಉತ್ತಮ ಸಹಕಾರ ನೀಡುತ್ತಿದ್ದರು ಎಂದು ಸ್ಮರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ಸರ್ವೇಕ್ಷಾಣಾಧಿಕಾರಿ ಡಾ. ಶಿವಕುಮಾರ್, ಡಾ. ಓ.ಆರ್. ಶ್ರೀರಂಗಪ್ಪ ಅವರ ಇಚ್ಛಾಶಕ್ತಿ, ಧೈರ್ಯ ವಂತಿಕೆ ಮತ್ತು ಕಾರ್ಯನಿರ್ವಹಣೆ ಕಲಿಯುವಂತಹದ್ದು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ಡಾ. ನಿಲೇಶ್, ಡಾ. ಚೇತನ್, ಮಾತನಾಡಿ, ಡಾ. ಓ.ಆರ್. ಶ್ರೀರಂಗಪ್ಪ ಅವರು ಒಳ್ಳೆಯ ಮಾರ್ಗದರ್ಶನ, ನಿರ್ದೇಶನ ಹಾಗೂ ಅತ್ಯುತ್ತಮ ಸಲಹೆ ನೀಡುತ್ತಿದ್ದರು. ಅವರಲ್ಲಿ ಇದ್ದ ಮಾನವೀಯ ಮೌಲ್ಯ, ಸ್ನೇಹಪರ ವ್ಯಕ್ತಿತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಡಾ. ಸುಪರ್ಣ, ಡಾ. ಆಶಾ, ಡಾ. ಶಿವಕುಮಾರ್, ಮಹ ದೇವಪ್ಪ, ಪುಟ್ಟಪ್ಪ, ಸ್ವಾಮಿ ಇತರರು ಡಾ. ಓ.ಆರ್. ಶ್ರೀರಂಗಪ್ಪ ಅವರ ಆಡಳಿತದ ಬಗ್ಗೆ ಗುಣಗಾನ ಮಾಡಿ ದರು. ಜಿಲ್ಲೆಯ ವಿವಿಧ ಆಸ್ಪತ್ರೆಯ ವೈದ್ಯಾಧಿಕಾರಿಗಳು, ವ್ಯವಸ್ಥಾಪಕರು, ಸಿಬ್ಬಂದಿಗಳು ಇತರರು ಇದ್ದರು.