ಕೂಡಿಗೆ, ಆ. 2: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾಗಿರುವ ಹಾರಂಗಿ ಜಲಾಶಯವು ಈಗಾಗಲೇ ಭರ್ತಿಯಾಗಿದ್ದು, ನಾಲೆಗಳಿಗೆ ನೀರು ಹರಿಸುವದರ ಬಗ್ಗೆ ಅಧಿಕಾರಿಗಳು ಕ್ರಮಕೈಗೊಳ್ಳದಿರುವ ಬಗ್ಗೆ ಜಲಾನಯನ ಪ್ರದೇಶದ ರೈತರು ಈಗಾಗಲೇ ಪ್ರತಿಭಟನೆಗಳನ್ನು ನಡೆಸಿದ್ದರೂ ನೀರು ಹರಿಸದೆ ಇರುವ ಹಿನ್ನೆಲೆಯಲ್ಲಿ ರೈತರು ಕಂಗಾಲಾಗಿದ್ದಾರೆ. ಅಧಿಕಾರಿಗಳು ನಾಲೆಯ ಮೂಲಕ ಕೊಡಗು ಜಿಲ್ಲೆಯ ಗಡಿಭಾಗಕ್ಕಾದರೂ ನೀರು ಹರಿಸದಿ ದ್ದರೆ ಹಾರಂಗಿ ಅಣೆಕಟ್ಟೆಯ ಎದುರು ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರನ್ನೊಳಗೊಂಡಂತೆ ಪಕ್ಷದ ಕಾರ್ಯಕರ್ತರು
(ಮೊದಲ ಪುಟದಿಂದ) ಸೇರಿ ಪ್ರತಿಭಟನೆ ಮಾಡಲಾಗುವದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಹೇಳಿದ್ದಾರೆ.
‘ಶಕ್ತಿ’ಯಲ್ಲಿ ಪ್ರಕಟವಾದ ಸುದ್ದಿಗೆ ಸ್ಪಂದಿಸಿದ ಶಾಸಕರು ಸುಪ್ರೀಂ ಕೋರ್ಟ್ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸುತ್ತ ತಮಿಳುನಾಡಿಗೆ ನೀರು ಹರಿಸುತ್ತಿದೆ. ಆದರೆ, ಕೊಡಗು ಜಿಲ್ಲೆಯಲ್ಲಿ ತೀರಾ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಹಾರಂಗಿ ಅಣೆಕಟ್ಟೆಯಿಂದ ಕೊಡಗಿನ ಗಡಿಭಾಗ ಶಿರಂಗಾಲದವರೆಗೆ ನಾಲೆಗಳ ಮೂಲಕ ನೀರನ್ನು ಹರಿಸಲೆಬೇಕು. ಇಲ್ಲದಿದ್ದಲ್ಲಿ ತೀವ್ರತರದ ಪ್ರತಿಭಟನೆ ಮಾಡಲಾಗುವದು ಎಂದು ಅಪ್ಪಚ್ಚುರಂಜನ್ ತಿಳಿಸಿದರು.