ಕೂಡಿಗೆ, ಆ. 2: ಕೇಂದ್ರ ಸರ್ಕಾರದ ಯೋಜನೆಗಳನ್ನು ಗ್ರಾಮಾಂತರ ಪ್ರದೇಶದ ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ಕಟಿಬದ್ಧರಾದಾಗ ಪಕ್ಷದ ಬೆಳವಣಿಗೆ ಸಾಧ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು.
ಸೀಗೆಹೊಸೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾರ್ಯ ಕರ್ತರನ್ನುದ್ದೇಶಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರಾಯೋಗಿಕವಾಗಿ ಕಾರ್ಯ ಕರ್ತರುಗಳು ಮನೆ ಮನೆಗಳಿಗೆ ತೆರಳಿ ಗ್ರಾಮೀಣ ಪ್ರದೇಶ ಗಳ ಜನರಿಗೆ ಮಾಹಿತಿ ನೀಡುವದರ ಜೊತೆಗೆ ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ಕಾರ್ಯ ಕರ್ತರು ಸಂಘಟಿತರಾಗಿ ತಳಮಟ ದಿಂದ ಮೇಲ್ಮಟ್ಟದವರೆಗೆ ತಮ್ಮನ್ನು ತೊಡಗಿಸಿಕೊಂಡರೆ ಪಕ್ಷದ ಬಲವರ್ಧನೆಗೆ ಸಹಕಾರಿಯಾಗುತ್ತದೆ ಎಂದರು.
ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರು ಗ್ರಾಮಗಳಿಗೆ ವಿಸ್ತಾರಕರಾಗಿದ್ದ ಕೊಡಗು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕ ಸ್ಥಾಯಿ ಸಮಿತಿಯ ಅಧ್ಯಕ್ಷ ಹೆಚ್.ಆರ್. ಶ್ರೀನಿವಾಸ್ ಅವರು ಮಾತನಾಡಿದರು.
ಈ ಸಂದರ್ಭ ಬಿಜೆಪಿ ತಾಲೂಕು ಉಪಾಧ್ಯಕ್ಷ ಕೆ.ಕೆ. ಭೋಗಪ್ಪ, ಆರ್ಎಂಸಿ ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ಕೂಡಿಗೆ ಗ್ರಾ.ಪಂ. ಅಧ್ಯಕ್ಷೆ ಪ್ರೇಮಲೀಲ, ಸದಸ್ಯ ಕೆ.ಟಿ. ಈರಯ್ಯ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಟಿ.ಗಿರೀಶ್ ವಹಿಸಿದ್ದರು.
ಕೊಡಗು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗಣಿಪ್ರಸಾದ್, ತಾಲೂಕು ಅಧ್ಯಕ್ಷ ಎಂ.ಎನ್.ಕುಮಾರಪ್ಪ, ಉಪಾಧ್ಯಕ್ಷ ಕೆ.ಕೆ. ಭೋಗಪ್ಪ, ತಾಲೂಕು ಯುವ ಮೋರ್ಚಾದ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ಮೂರು ಗ್ರಾ.ಪಂ.ಯ ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಶಿವಾನಂದ, ಕಾರ್ಯದರ್ಶಿ ಮಣಿ, ಕೂಡಿಗೆ ಗ್ರಾ.ಪಂ. ಸದಸ್ಯ ಮಂಜಯ್ಯ ಸೇರಿದಂತೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರುಗಳು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಇದ್ದರು.
ಇದೇ ಸಂದರ್ಭ ಕೂಡಿಗೆ ಗ್ರಾಮ ಪಂಚಾಯಿತಿಯ ಸದಸ್ಯರಾದ ಕೆ.ಕೆ. ಮಂಜಯ್ಯ, ಶಿವಣ್ಣ ಸೇರಿದಂತೆ ವಿವಿಧ ಪಕ್ಷಗಳ ಕಾರ್ಯಕರ್ತರು ಬಿಜೆಪಿ ಬಿಜೆಪಿಗೆ ಸೇರ್ಪಡೆಗೊಂಡರು.