ನಾಪೆÉÇೀಕ್ಲು, ಜು. 4: ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರನ್ನು ನೇಮಕಗೊಳಿಸುವಂತೆ ಒತ್ತಾಯಿಸಿ ಜು. 17ರಂದು ಸಮುದಾಯ ಆರೋಗ್ಯ ಕೇಂದ್ರದ ಎದುರು ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿದ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ.ಇಸ್ಮಾಯಿಲ್ ಜನಪ್ರತಿನಿಧಿಗಳೊಂದಿಗೆ ಮಾತನಾಡಿ, ಒಂದು ತಿಂಗಳೊಳಗಾಗಿ ವೈದ್ಯರ ನೇಮಕಗೊಳಿಸುವ ಭರವಸೆ ನೀಡಿದ್ದಾರೆ. ಆದರೆ ದಿನಗಳುರುಳಿದರೂ ವೈದ್ಯರ ನೇಮಕ ಆಗಿಲ್ಲ. ಆದುದರಿಂದ ಕೂಡಲೇ ವೈದ್ಯರ ನೇಮಕವಾಗದಿದ್ದರೆ ನಾಪೆÇೀಕ್ಲು ಪಟ್ಟಣವನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವದೆಂದು ನಾಪೆÇೀಕ್ಲು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಎಚ್ಚರಿಸಿದ್ದಾರೆ.

ಈ ಬಗ್ಗೆ ‘ಶಕ್ತಿ’ಯೊಂದಿಗೆ ಮಾತನಾಡಿದ ಅವರು ನಾಪೆÇೀಕ್ಲು ಮಡಿಕೇರಿ ಪಟ್ಟಣದಲ್ಲಿ ಎರಡನೇ ದೊಡ್ಡ ಪಟ್ಟಣವಾಗಿದ್ದು, ಈ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ 27 ಗ್ರಾಮಗಳ ರೋಗಿಗಳು, ಜನ ಆಗಮಿಸುತ್ತಿದ್ದಾರೆ. ಆದರೆ ಇಲ್ಲಿ ಖಾಯಂ ವೈದ್ಯರೇ ಇಲ್ಲ. ಆದುದರಿಂದ ಕೂಡಲೇ ವೈದ್ಯರ ನೇಮಕಕ್ಕೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಹಿಂದೆ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಮಡಿಕೇರಿ ತಾಲೂಕು ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಕದ್ದಣಿಯಂಡ ಹರೀಶ್ ಬೋಪಣ್ಣ ಅವರನ್ನು ಸಂಪರ್ಕಿಸಿದಾಗ ತಿಂಗಳ ಒಳಗೆ ತಜ್ಞ ವೈದ್ಯರ ನೇಮಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ತಜ್ಞ ವೈದ್ಯರನ್ನು ನೇಮಕ ಮಾಡಿರುವದಿಲ್ಲ. ಕೂಡಲೇ ಇವರು ತಮ್ಮ ಮಾತನ್ನು ಉಳಿಸಿಕೊಳ್ಳಬೇಕೆಂದು ಒತ್ತಾಯಿಸಿದರು.