ಸೋಮವಾರಪೇಟೆ, ಆ. 5: 71ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ತಾಲೂಕು ಸಂಸ್ಥೆ ವತಿಯಿಂದ ತಾ. 8 ರಂದು ತಾಲೂಕು ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಗಳನ್ನು ಸ್ಕೌಟ್ಸ್, ಗೈಡ್ಸ್, ಬುಲ್ ಬುಲ್ ವಿದ್ಯಾರ್ಥಿಗಳ ತಂಡಗಳಿಗೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಬಿ.ಎ. ಭಾಸ್ಕರ್ ತಿಳಿಸಿದ್ದಾರೆ.

ತಾ.8ರಂದು ತಾಲೂಕು ಸಂಸ್ಥೆಯ ಸಭಾಂಗಣದಲ್ಲಿ ಪೂರ್ವಾಹ್ನ 10 ಗಂಟೆಗೆ ಗಾಯನ ಸ್ಪರ್ಧೆಯು ಆರಂಭಗೊಳ್ಳಲಿದೆ. ಪ್ರತಿಯೊಂದು ತಂಡದಲ್ಲಿ 8ರಿಂದ 15 ವಿದ್ಯಾರ್ಥಿಗಳು ವೇಷಭೂಷಣಗಳೊಂದಿಗೆ ಭಾಗವಹಿಸಬೇಕು. ತಾಲೂಕು ಮಟ್ಟದ ಈ ಸ್ಪರ್ಧೆಯಲ್ಲಿ ವಿಜೇತರಾಗುವ ಪ್ರಥಮ, ದ್ವಿತೀಯ ಹಾಗೂ ತೃತೀಯ ತಂಡಗಳನ್ನು ಜಿಲ್ಲಾ ಮಟ್ಟಕ್ಕೆ ಕಳುಹಿಸಿಕೊಡಲಾಗುವದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ತಂಡವನ್ನು ರಾಜ್ಯಮಟ್ಟಕ್ಕೆ ಕಳುಹಿಸಿಕೊಡಲಾಗುವದು. ಹೆಚ್ಚಿನ ಮಾಹಿತಿಗಾಗಿ 9449031311ರಲ್ಲಿ ಸಂಪರ್ಕಿಸಬಹುದಾಗಿ ಅವರು ತಿಳಿಸಿದ್ದಾರೆ.