ಗೋಣಿಕೊಪ್ಪಲು, ಆ .5: ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾ .8 ರಂದು ಬೆಳಿಗ್ಗೆ 10 ಗಂಟೆಯಿಂದ ರಕ್ತದಾನಿಗಳ ಶಿಬಿರ ಆರಂಭವಾಗಲಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಮಡಿಕೇರಿ, ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿಗಳು, ವಿವಿಧ ಸಂಘ ಸಂಸ್ಥೆಗಳು ಹಾಗೂ ಸ್ವಯಂ ಸೇವಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ರಕ್ತದಾನದಿಂದ ಮಾನವನ ಆರೋಗ್ಯಕ್ಕೆ ಆಗುವ ಲಾಭಗಳು, ರಕ್ತದ ಗುಂಪು ವಿಂಗಡಣೆ, ರಕ್ತ ಪರೀಕ್ಷೆ ಇತ್ಯಾದಿಗಳ ವಿಷಯವಾಗಿ ವೈದ್ಯರು ಮಾಹಿತಿ ನೀಡಲಿದ್ದಾರೆ. ಸ್ವಯಂಪ್ರೇರಿತರಾಗಿ ಅಂದು ಬಂದು ರಕ್ತದಾನ ಮಾಡುವಂತೆಯೂ ಮನವಿ ಮಾಡಿದ್ದಾರೆ.