ಕುಶಾಲನಗರ, ಆ. 7: ತಮ್ಮ ಅಧಿಕಾರಾವಧಿಯಲ್ಲಿ ಅರೆಭಾಷೆ ಸಾಹಿತ್ಯ ಅಕಾಡೆಮಿಯು ಜಿಲ್ಲೆ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್ ತಿಳಿಸಿದ್ದಾರೆ.

ಅವರು ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ಅಭಿನಂದನಾ ಹಾಗೂ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಂಸ್ಕøತಿ ಪರಿಚಯಿಸುವ ನಿಟ್ಟಿನಲ್ಲಿ ಪುಸ್ತಕಗಳ ಲೋಕಾರ್ಪಣೆ ಸೇರಿದಂತೆ ವಿವಿಧ ಚಟುವಟಿಕೆಗಳ ಮೂಲಕ ಯುವಪೀಳಿಗೆಗೆ ಮಾರ್ಗದರ್ಶನ ನೀಡುವಲ್ಲಿ ಅಕಾಡೆಮಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವದಾಗಿ ಮಾಹಿತಿ ಒದಗಿಸಿದರು.

ಈ ಸಂದರ್ಭ ಅರೆಭಾಷೆ ಸಮುದಾಯ ಸೇರಿದಂತೆ ಎಲ್ಲರ ಸಂಪೂರ್ಣ ಸಹಕಾರ ಒದಗಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಕುಶಾಲನಗರ ಗೌಡ ಸಮಾಜ ಸಭಾಂಗಣದಲ್ಲಿ ಗೌಡ ಸಮಾಜ ಅಧ್ಯಕ್ಷ ಕೇಚಪ್ಪನ ಮೋಹನ್‍ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಯಶಸ್ವಿಯಾಗಿ ಅಕಾಡೆಮಿ ಅಧ್ಯಕ್ಷತೆಯನ್ನು ನಿರ್ವಹಿಸಿದ ಕೊಲ್ಯದ ಗಿರೀಶ್, ಕುಶಾಲನಗರ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಎಂ.ಎಂ.ಚರಣ್, ಯುವಕ ಸಂಘದ ಉಪಾಧ್ಯಕ್ಷರು ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿರುವ ಚಿಲ್ಲನ ಗಣಿಪ್ರಸಾದ್ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಗೌಡ ಯುವಕ ಸಂಘದ ಅಧ್ಯಕ್ಷ ಪಂಜಿಪಳ್ಳ ಯತೀಶ್, ಅಕಾಡೆಮಿ ಸದಸ್ಯರುಗಳಾದ ಕೋರನ ಸರಸ್ವತಿ, ಮಂದ್ರಿರ ಮೋಹನ್‍ದಾಸ್, ಕುಡೆಕಲ್ ಸಂತೋಷ್, ಪಟ್ಟಂದಿ ಬೀನಾ ಸೀತಾರಾಂ, ಕೇಚಪ್ಪನ ಪ್ರಮೀಳಾ ಮೋಹನ್ ಮತ್ತಿತರರು ಇದ್ದರು. ಯುವಕ ಸಂಘದ ಆನಂದ್ ಕರಂದ್ಲಾಜೆ ಕಾರ್ಯಕ್ರಮ ನಿರೂಪಿಸಿದರು, ಶಿವಪ್ರಕಾಶ್ ಸ್ವಾಗತ, ಚೆರಿಯಮನೆ ಹರೀಶ್ ವಂದಿಸಿದರು.