ಮಡಿಕೇರಿ, ಆ. 9: ಕಾಂಗ್ರೆಸ್ ಪಕ್ಷದ ವತಿಯಿಂದ ಕ್ವಿಟ್ ಇಂಡಿಯಾ ಚಳವಳಿಯ 75ನೇ ವಾರ್ಷಿ ಕೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಮಮತಾಗಟ್ಟಿ ಮಾತನಾಡಿ, ನಮ್ಮ ಸರಕಾರದ ಅಭಿವೃದ್ಧಿ ಕಾರ್ಯ ಕ್ರಮಗಳನ್ನು ರಾಜ್ಯದ ಜನತೆಗೆ ತಿಳಿಸಿದ ಪಕ್ಷದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಮುಂದಿನ ಬಾರಿಯೂ ಅಧಿಕಾರ ಹಿಡಿಯಲಿದೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು. ಮುಂದಿನ ವಿಧಾನಸಭೆ ಚುನಾವಣೆ ಯಲ್ಲಿ ನಮ್ಮ ಪಕ್ಷದ ಆಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಬೇಕು. ಆ ಮೂಲಕ ಜಿಲ್ಲೆಯ ಎರಡು ಸ್ಥಾನದಲ್ಲೂ ನಾವು ಅಧಿಕಾರ ಹಿಡಿಯಬೇಕು ಎಂದು ಹೇಳಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮೇಲೆ ಜನತೆ ದೊಡ್ಡ ಗೌರವವನ್ನಿಟ್ಟು ಕೊಂಡಿದ್ದರು. ಆದರೆ ಗುಜರಾತ್ ರಾಜ್ಯಸಭಾ ಚುನಾವಣೆ ಯಲ್ಲಿ ಕೀಳುಮಟ್ಟದ ರಾಜಕಾರಣ ಮಾಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದ್ದರಿಂದ ಆ ಗೌರವವನ್ನು ಕಳೆದುಕೊಂಡಿದ್ದಾರೆ ಎಂದು ದೂರಿದರು. ಕೆಪಿಸಿಸಿ ಕಾರ್ಯದರ್ಶಿ ಹಾಗೂ ಚಾಮರಾಜನಗರ ಜಿ.ಪಂ. ಅಧ್ಯಕ್ಷ ರಾಮಚಂದ್ರ ಮಾತನಾಡಿದರು.