ಮಡಿಕೇರಿ, ಆ. 8: ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ (ಮೂಡ)ದ ಮಾಜೀ ಅಧ್ಯಕ್ಷ ಎ.ಕೆ. ಪಾಲಾಕ್ಷ ಅವರು, ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತನಕ್ಕೆ ರಾಜೀನಾಮೆ ನೀಡಿದ್ದಾರೆ.ಕಳೆದ ಸುಮಾರು 35 ವರ್ಷಗಳಿಂದ (1984 ರಿಂದ) ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು, ಪ್ರಸ್ತುತ ಜಿಲ್ಲೆಯಲ್ಲಿ ಕೆಲವೇ ಕೆಲವು ವ್ಯಕ್ತಿಗಳ ಹಿಡಿತದಲ್ಲಿ ಪಕ್ಷ ನಲುಗುತ್ತಿದ್ದು, ಉತ್ತಮ್ಮ ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗಿರುವದರಿಂದ ಮನ ನೊಂದು ಪಕ್ಷ ತೊರೆಯುತ್ತಿರುವದಾಗಿ ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಬಿಜೆಪಿ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಭಾರತ ಸೇವಾದಳ ಕೇಂದ್ರ ಸಮಿತಿ ಸದಸ್ಯ ರಾಗಿರುವ ಇವರು, ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಗುಡ್ಡಮನೆ ಅಪ್ಪಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಕಾರ್ಯದರ್ಶಿಯೂ ಆಗಿದ್ದಾರೆ.