ಶನಿವಾರಸಂತೆ, ಆ. 9: ಕೊಡಗು ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕೊಡ್ಲಿಪೇಟೆ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ತಾ. 10, 11 ಮತ್ತು 12ರವರೆಗೆ ಕೊಡ್ಲಿಪೇಟೆ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ತಾ. 10 ರಂದು (ಇಂದು) ಬೆಳಿಗ್ಗೆ 9.30ಕ್ಕೆ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಗೌರವ ಅಧ್ಯಕ್ಷ ಎಸ್.ಎಸ್. ನಾಗರಾಜ್ ಅಧ್ಯಕ್ಷತೆ ವಹಿಸಲಿರುವರು. ವಿದ್ಯಾಸಂಸ್ಥೆಯ ಅಧ್ಯಕ್ಷ ಹೆಚ್.ಎಸ್. ಚಂದ್ರಮೌಳಿ ಸಮಾರಂಭವನ್ನು ಉದ್ಘಾಟಿಸಲಿರುವರು. ಸೋಮವಾರಪೇಟೆ ತಾ.ಪಂ. ಅಧ್ಯಕ್ಷೆ ಪುಷ್ಪ ರಾಜೇಶ್ ಕ್ರೀಡಾಜ್ಯೋತಿಯನ್ನು ಉದ್ಘಾಟಿಸಿ ಮಾತನಾಡಲಿರುವರು. ಜಿ.ಪಂ. ಸದಸ್ಯ ಪುಟ್ಟರಾಜು ಪ್ರಮಾಣ ವಚನ ಬೋಧನೆ ಮಾಡಲಿರುವರು. ಮುಖ್ಯ ಅತಿಥಿಗಳಾಗಿ ತಾ.ಪಂ. ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಸದಸ್ಯ ಕುಶಾಲಪ್ಪ ಗ್ರಾ.ಪಂ. ಅಧ್ಯಕ್ಷೆ ಅನುಸೂಯ ಹೇಮರಾಜ್, ಬೆಸೂರು ಗ್ರಾ.ಪಂ. ಅಧ್ಯಕ್ಷೆ ಪಾರ್ವತಿ ಸುರೇಶ್, ಬ್ಯಾಡಗೊಟ್ಟ ಗ್ರಾ.ಪಂ. ಅಧ್ಯಕ್ಷೆ ನಿರ್ಮಲ, ಹಂಡ್ಲಿ ಗ್ರಾ.ಪಂ. ಅಧ್ಯಕ್ಷ ಸುದೀಪ್, ಪಂಚಾಯಿತಿಗಳ ಆಡಳಿತ ಮಂಡಳಿ ಸದಸ್ಯರುಗಳು, ವಿದ್ಯಾಸಂಸ್ಥೆಯ ನಿರ್ದೇಶಕರು, ಅಧಿಕಾರಿ ವರ್ಗದವರು, ಶಿಕ್ಷಕರುಗಳು, ಸಾರ್ವಜನಿಕರು ಉಪಸ್ಥಿತರಿರುವರು ಎಂದು ವಿದ್ಯಾಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಸಮಾರೋಪ
ತಾ.12ರಂದು ಮಧ್ಯಾಹ್ನ 3.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆ ಗೌರವ ಅಧ್ಯಕ್ಷ ಎಸ್.ಎಸ್. ನಾಗರಾಜ್ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪರಮೇಶ್, ಪ್ರಾಂಶುಪಾಲ ನಿರಂಜನ್, ಉಲ್ಲಾಸ್, ಪ್ರೌಢಶಾಲಾ ವಿಭಾಗದ ಅಬ್ದುಲ್‍ರಬ್ ಉಪಸ್ಥಿತರಿರುವರು.