ಮಡಿಕೇರಿ, ಆ. 8 : ಕೊಡಗು ಪ್ರೆಸ್‍ಕ್ಲಬ್ ಹಾಗೂ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸಹಯೋಗದಲ್ಲಿ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮ ನಡೆಯಿತು. ‘ವಿದ್ಯುನ್ಮಾನ ಮಾಧ್ಯಮ ದಲ್ಲಿನ ಅವಕಾಶ ಮತ್ತು ಸವಾಲುಗಳ’ ಕುರಿತು ಖಿಗಿ9 ಜಿಲ್ಲಾ ವರದಿಗಾರ ಕೆ.ಬಿ. ಮಂಜುನಾಥ್ ಮಾತನಾಡಿ, ದೃಶ್ಯ ಮಾಧ್ಯಮ ಪೈಪೋಟಿಯಿಂದ ಕೂಡಿದೆ. ಆದ್ದರಿಂದ ಯಾವದೇ ಕಾರಣಕ್ಕೂ ಸಮಾಜಕ್ಕೆ ತಪ್ಪು ಸಂದೇಶ ನೀಡದೆ ಹಾಗೂ ವಿಶ್ವಾಸಾರ್ಹತೆ ಕಳೆದುಕೊಳ್ಳದಂತೆ ಕೆಲಸ ಮಾಡುವದು ಅನಿವಾರ್ಯವಾಗಿದೆ. ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅವಕಾಶಗಳು ಹೆಚ್ಚಾಗಿದೆ. ಆದ್ದರಿಂದ ತಾವು ಪಠ್ಯಕ್ಕೆ ಮಾತ್ರ ಸೀಮಿತ ವಾಗಿರದೇ ಇತರ ವಿಷಯಗಳನ್ನು ಅಧ್ಯಯನ ಮಾಡಬೇಕು ಎಂದು ಹೇಳಿದರು.

ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಒಂದು ಅತ್ಯುತ್ತಮ ಸುದ್ದಿ ಹಾಗೂ ಛಾಯಾಚಿತ್ರ ಪತ್ರಕರ್ತರನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ. ಆದ್ದರಿಂದ ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿ ಗಳು ತಮ್ಮ ಬಿಡುವಿನ ವೇಳೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುವ ಬದಲು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕೆಂದರು.

ಪ್ರೆಸ್‍ಕ್ಲಬ್ ಖಜಾಂಚಿ ರೆಜಿತ್ ಕುಮಾರ್ ಮಾತನಾಡಿ, ಕೊಡಗು ಪ್ರೆಸ್‍ಕ್ಲಬ್ ವತಿಯಿಂದ ಪತ್ರಿಕೋದ್ಯ ಮದ ವಿದ್ಯಾರ್ಥಿಗಳಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಪ್ರತಿ ಮಂಗಳವಾರ ಮಾಧ್ಯಮ ಸಂವಾದ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕಾಲೇಜಿನ ಪ್ರಾಂಶುಪಾಲೆ ಪಾರ್ವತಿ ಅಪ್ಪಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮ ದಲ್ಲಿ ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಮೋನಿಕಾ, ಇಳಯರಾಜ, ಮತ್ತಿತರರು ಹಾಜರಿದ್ದರು.