ಸಿದ್ದಾಪುರ, ಆ. 9 : ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದ ಕಾಡು ರಸ್ತೆ ಕಾಮಗಾರಿಗೆ ಭೂಮಿಪೂಜೆಯನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಮಂಜುನಾಥ್ ನೆರವೇರಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ತಮ್ಮ ಅನುದಾನದಿಂದ ರೂ. 4 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿಯಲ್ಲಿ ಸರಕಾರದ ವತಿಯಿಂದ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಹಲವಾರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸುವದಾಗಿ ಭರವಸೆ ನೀಡಿದರು.
ಈ ಸಂದರ್ಭ ತಾ.ಪಂ. ಸದಸ್ಯೆ ಸುಹದಾ ಅಶ್ರಫ್, ಗ್ರಾ.ಪಂ. ಅಧ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷೆ ಸಫೀಯ, ಸದಸ್ಯರುಗಳಾದ ಎ.ಕೆ. ಹಕೀಂ, ಅನೀಫ್, ಮುಸ್ತಫ, ಅನ್ನಮ್ಮ, ಕಾಂಗ್ರೆಸ್ ವಲಯಾ ಅಧ್ಯಕ್ಷ ಅಬ್ದುಲ್ ರಜಾಕ್ ಹಾಗೂ ಇತರರು ಹಾಜರಿದ್ದರು.