ಶ್ರೀಮಂಗಲ, ಆ. 12: ಜಿಲ್ಲೆಯಲ್ಲಿ ಎಲ್ಲಾ ಜನಾಂU ಒಗ್ಗಟ್ಟಿನಲ್ಲಿದೆ. ಆದರೆ ಬಿಜೆಪಿ ಜಾತಿ ಜಾತಿಗಳ ಮಧ್ಯೆ ಕೋಮುವಾದವನ್ನು ಉಂಟು ಮಾಡುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಜಾತಿ ಧರ್ಮದವರು ಒಂದಾಗಿ ಬಾಳುತ್ತಿದ್ದಾರೆ. ಜಾತಿ ವಿಷ ಬೀಜವನ್ನು ಬಿತ್ತುತ್ತಿರುವ ಬಿಜೆಪಿ ಪಕ್ಷವನ್ನು ಕ್ವಿಟ್ ಇಂಡಿಯಾ ಮಾಡಬೇಕಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುಕ್ಕಾಟಿರ ಶಿವು ಮಾದಪ್ಪ ಕಾರ್ಯಕರ್ತರಿಗೆ ಕರೆ ನೀಡಿದರು.

ಪೊನ್ನಂಪೇಟೆ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ವತಿಯಿಂದ ಮಹಿಳಾ ಸಮಾಜದಲ್ಲಿ ನಡೆದ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಹಲವು ದಶಕಗಳಿಂದ ದೇಶವನ್ನು ಅಭಿವೃದ್ಧಿ ಪಥÀದಲ್ಲಿ ತಂದಂತಹ ಜನ ಸಾಮಾನ್ಯರ, ದೀನ ದಲಿತ, ಅಲ್ಪಸಂಖ್ಯಾತರ ಪಕ್ಷವಾಗಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಪಕ್ಷವನ್ನು ಯಾರಿಂದಲೂ ಹಾಳು ಮಾಡಲು ಸಾಧ್ಯವಿಲ್ಲ. ಆದರೆ, ಬಿಜೆಪಿ ಕಾಂಗ್ರೆಸ್ ಮುಕ್ತ ಘೋಷಣೆ ಮಾಡುತ್ತಿರುವದು ಎಷ್ಟು ಅಸಮಂಜಸ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾg ಕೊಡಗು ಜಿಲ್ಲಾ ವಕ್ಫ್ ಬೋರ್ಡ್‍ನ ಮುಖಾಂತರ ರೂ. 3,50,000 ಅನುದಾನವನ್ನು ಒಂದೇ ಕಂತಿನಲ್ಲಿ ನೀಡಿದೆ. ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೋ ಅಂತವರನ್ನು ವಿಧಾನ ಸಭೆಗೆ ಆರಿಸಿ ಕಳುಹಿಸುವ ಜವಾಬ್ದಾರಿಯನ್ನು ಅಲ್ಪಸಂಖ್ಯಾತ ಬಂಧುಗಳು ಮಾಡಬೇಕಾಗಿದೆ ಎಂದು ತಿಳಿಸಿದರು. ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಯಾಕೂಬ್ ಮಾತನಾಡಿ,

ಇಂದು ಜಿಲ್ಲೆಯಲ್ಲಿ ಮುಸ್ಲಿಂ ಮತಗಳನ್ನು ಒಡೆದು ಹಾಕುವ ಬಿಜೆಪಿ ಬೆಂಬಲಿತ ಮುಸ್ಲಿಂ ಮಂಚ್ ಮತ್ತು ಎಸ್‍ಡಿಪಿಐ ಮತ್ತು ಪಿಎಫ್‍ಐ ಕಾರ್ಯನಿರ್ವಹಿಸುತ್ತಿದೆ. ಇಂತಹ ಸಂಘಟನೆಗಳ ಬಗ್ಗೆ ಅಲ್ಪಸಂಖ್ಯಾತರು ಎಚ್ಚರ ವಹಿಸಬೇಕಾಗಿದೆ. ಜಾತ್ಯತೀತ ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ನಾಯಕರಿಗೆ ಎಂಎಲ್‍ಎ ಸ್ಥಾನ ನೀಡಬೇಕು ಎಂದು ಅಗ್ರಹಿಸುವದು ಸರಿಯಲ್ಲ ಎಂದು ಮನವರಿಕೆ ಮಾಡಿದರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಮಾತನಾಡಿ 4 ವರ್ಷಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತವನ್ನು ನೀಡಿದೆ. ಮುಂದಿನ ಚುನಾವಣೆಗೆ ಪೂರಕವಾಗಿ ಪೊನ್ನಂಪೇಟೆ ಬ್ಲಾಕ್‍ನಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ನಡೆಸುವದರ ಮೂಲಕ ಪಕ್ಷದ ಎಲ್ಲಾ ಸಂಘಟನೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಹಿಂದುಳಿದ ವರ್ಗದ ಜಿಲಾಧ್ಯಕ್ಷ ಸರ ಚಂಗಪ್ಪ ಮಾತನಾಡಿ ಕಳೆದ 65 ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದಂತಹ ಸಾಧನೆಗಳನ್ನು ಮರು ನಾಮಕರಣ ಮಾಡಿ ಇಂದಿನ ಕೇಂದ್ರ ಸರ್ಕಾರ ಸುಳ್ಳು ಮಾಹಿತಿಯನ್ನು ಜನರಿಗೆ ನೀಡುತ್ತಿದೆ ಎಂದು ತಿಳಿಸಿದರು.

ಪೊನ್ನಂಪೇಟೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅನೀಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾಸ್ತಾವಿಕ ನುಡಿಯನ್ನು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಬಾಬು ಮಾಡಿದರೆ. ಪೊನ್ನಂಪೇಟೆ ವಲಯ ಕಾಂಗ್ರೆಸ್ ಅಧ್ಯಕ್ಷ ಮತ್ರಂಡ ದಿಲು, ಪೊನ್ನಂಪೇಟೆ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ ಬಾಪು, , ತಾ.ಪಂ. ಸದಸ್ಯೆ ಆಶಾ ಪೂಣಚ್ಚ, ಮಾತನಾಡಿದರು.

ವೇದಿಕೆಯಲ್ಲಿ ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷೆ ಮೂಕಳೇರ ಸುಮಿತಾ ಗಣೇಶ್, ಗೋಣಿಕೊಪ್ಪಲು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಖಲಿಮುಲ್ಲಾ, ಎಂ.ಎ. ಸಮೀರ್, ಪೊನ್ನಂಪೇಟೆ ಮಹಿಳಾ ಘಟಕದ ಅಧ್ಯಕ್ಷೆ ಕೋಳೆರ ಭಾರತಿ, ವಿಜಯ, ಡಿ.ಸಿ.ಸಿ .ಉಪಾಧ್ಯಕ್ಷ ಮಹಮದ್ ಹಾಜಿ ಮುಂತಾದವರು ಉಪಸ್ಥಿತರಿದ್ದರು.