ಮಡಿಕೇರಿ, ಆ. 11: ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಯೂತ್ ಹಾಸ್ಟೇಲ್ ಅಸೋಷಿಯೇಷನ್ ಆಫ್ ಇಂಡಿಯಾ, ಮಡಿಕೇರಿ ಘಟಕ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ತಾ. 12 ರಂದು (ಇಂದು) ಬೆಳಗ್ಗೆ 10.30 ಗಂಟೆಗೆ ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ. ಬೋಪಯ್ಯ ಅವರ ಗದ್ದೆಯಲ್ಲಿ 26ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡೋತ್ಸವ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್, ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಜಿ.ಪಂ. ಉಪಾಧ್ಯಕೆÀ್ಷ ಲೋಕೇಶ್ವರಿ ಗೋಪಾಲ್, ತಾ.ಪಂ. ಸದಸ್ಯೆ ಕುಮುದ ರಶ್ಮಿ, ಹಾಕತ್ತೂರು ಗ್ರಾ.ಪಂ. ಅಧ್ಯಕ್ಷೆ ಶಾರದ ರಾಮಕೃಷ್ಣ, ಮೇಕೇರಿ ಗ್ರಾ.ಪಂ. ಉಪಾಧ್ಯಕ್ಷ ಕೆ.ಎಸ್. ಭೀಮಯ್ಯ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಕಾಂಗೀರ ಸತೀಶ್, ಕಗ್ಗೋಡ್ಲು ಗ್ರಾಮ ಕೃಷಿ ಪಂಡಿತ ಮಂದ್ರೀರ ತೇಜಸ್ ನಾಣಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.
ಸಂಜೆ 5.30 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೊಂಡ ಶಶಿ ಸುಬ್ರಮಣಿ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಮಡಿಕೇರಿ ತಾ.ಪಂ. ಅಧ್ಯಕೆÀ್ಷ ತೆಕ್ಕಡೆ ಶೋಭಾ ಮೋಹನ್, ಯೂತ್ ಹಾಸ್ಟೆಲ್ ಅಸೋಷಿಯೇಷನ್ ಆಫ್ ಇಂಡಿಯಾದ ಅಧ್ಯಕ್ಷ ಸಿ.ಬಿ.ದೇವಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.