ಮಡಿಕೇರಿ, ಆ. 12: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 14 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸಮಾರಂಭ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಕರ್ನಾಟಕ ರೇಷ್ಮೆ ಮಹಾ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಎಂ. ಪದ್ಮಿನಿ ಪೊನ್ನಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಗೊಲ್ಲ ಸಮಾಜದ ಜಿಲ್ಲಾಧ್ಯಕ್ಷ ಆಚೀರ ಎಸ್. ನಾಣಯ್ಯ, ಮಡಿಕೇರಿ ಇಸ್ಕಾನ್ ಮುಖ್ಯಸ್ಥ ಜೆ.ಪಿ. ರಾಜಣ್ಣ, ಬೆಂಗಳೂರು ಇಸ್ಕಾನ್‍ನ ಧೀನಾನಾಥ್ ಚೈತನ್ಯದಾಸ್ ಇತರರು ಪಾಲ್ಗೊಳ್ಳಲಿದ್ದಾರೆ.