ಕುಶಾಲನಗರ, ಆ. 14: ಕುಶಾಲನಗರದ ಹಿಂದು ಜಾಗರಣಾ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.

ಬೈಚನಹಳ್ಳಿಯ ಮಾರಿಯಮ್ಮ ದೇವಾಲಯದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಭಾ ಕಾರ್ಯಕ್ರಮದ ನಡೆಯುವ ರೈತ ಸಹಕಾರ ಭವನದ ಬಳಿ ಸಮಾಪ್ತಿ ಗೊಂಡಿತು. ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರಪ್ರಸಾದ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು.