ಸೋಮವಾರಪೇಟೆ, ಆ. 14: ತಾಲೂಕು ಹಿಂದೂ ಮಲಯಾಳ ಸಮಾಜದ ವತಿಯಿಂದ ಅಕ್ಟೋಬರ್ 8 ರಂದು ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಎರಡನೇ ವರ್ಷದ ಓಣಂ ಉತ್ಸವ ನಡೆಯಲಿದೆ ಎಂದು ಉತ್ಸವ ಸಮಿತಿಯ ಅಧ್ಯಕ್ಷ ವಿ.ಎಂ.ವಿಜಯ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಸವದ ಅಂಗವಾಗಿ ಸಮಾಜ ಬಾಂಧವರಿಗೆ ಪೂಕಳಂ ಸ್ಪರ್ಧೆ, ಶಾಲಾ ಮಕ್ಕಳಿಗೆ ನೃತ್ಯ ಸ್ಪರ್ಧೆ ನಡೆಯಲಿದೆ. ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವದು ಎಂದು ಮಾಹಿತಿ ನೀಡಿದರು. ಅಂದು ಬೆಳಗ್ಗೆ 9 ಗಂಟೆಗೆ ಇಲ್ಲಿನ ಕಕ್ಕೆಹೊಳೆ ಬಳಿಯ ಮುತ್ತಪ್ಪ ದೇವಸ್ಥಾನದಿಂದ ಪಟ್ಟಣದ ಮುಖ್ಯ ರಸ್ತೆಗಳ ಮೂಲಕ ಮೆರೆವಣಿಗೆಯಲ್ಲಿ ತೆರಳಿ ಒಕ್ಕಲಿಗರ ಕಲ್ಯಾಣ ಮಂಟಪದ ಎದುರು ಸಮಾವೇಶಗೊಳ್ಳಲಿದೆ. ಮೆರವಣಿಗೆಯಲ್ಲಿ ಕೇರಳದ ಪ್ರಖ್ಯಾತ ಚಂಡೆವಾದ್ಯಗಳೊಂದಿಗೆ ಸಿಂಗಾರಿ ಮೇಳ ನಡೆಯಲಿದೆ. ಅಂದು ಸಂಜೆ ಸಮಾಜದ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಸಮಾಜದ ಅಭಿವೃದ್ಧಿಯಲ್ಲಿ ಜನಾಂಗ ಬಾಂಧವರು ತಮ್ಮನ್ನು ತೊಡಗಿಸಿಕೊಳ್ಳಬೇಕು. ಎರಡನೇ ವರ್ಷದ ಓಣಂ ಆಚರಣೆಯಲ್ಲಿ ಹಿಂದೂ ಮಲಯಾಳ ಸಮಾಜದ ಪ್ರಮುಖರು, ಜನಾಂಗ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಾಂಸ್ಕøತಿಕ ಶ್ರೀಮಂತಿಕೆಯನ್ನು ಇನ್ನಷ್ಟು ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು. ಗೋಷ್ಠಿಯಲ್ಲಿ ತಾಲೂಕು ಹಿಂದೂ ಮಲಯಾಳ ಸಮಾಜದ ಅಧ್ಯಕ್ಷರಾದ ಪಿ.ಡಿ.ಪ್ರಕಾಶ್, ಪದಾಧಿಕಾರಿಗಳಾದ ಅಯ್ಯಪ್ಪ, ಐಗೂರು ಶಿವದಾಸ್, ಗಂಗಾಧರ್, ರಾಜನ್, ಸಲಹೆಗಾರರಾದ ಮಾಲಂಬಿ ಗಂಗಾಧರ್, ಮಹಿಳಾ ಘಟಕದ ಅಧÀ್ಯಕ್ಷರಾದ ಸುಜಾತ ಉಪಸ್ಥಿತರಿದ್ದರು.