ಮಡಿಕೇರಿ, ಆ. 14: ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಆರೋಗ್ಯಯುತ ಸ್ಪರ್ಧಾ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಇಲಾಖೆ ವತಿಯಿಂದ ಭತ್ತದ ಬೆಳೆ ಸ್ಪರ್ಧೆಯನ್ನು ತಾಲೂಕು/ಜಿಲ್ಲಾ/ ರಾಜ್ಯಮಟ್ಟದಲ್ಲಿ ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಮಡಿಕೇರಿ ತಾಲೂಕಿನ ರೈತರು ದಿನಾಂಕ 31-8-2017 ರ ಒಳಗಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಹೆಸರು ನೋಂದಾಯಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿವಿಧ ಹಂತದ ಬೆಳೆ ಸ್ಪರ್ಧೆಗೆ ಭಾಗವಹಿಸುವ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರುಗಳು ಈ ಕೆಳಕಂಡಂತೆ ನಿಗದಿತ ಪ್ರವೇಶ ಶುಲ್ಕವನ್ನು ಸಂದಾಯ ಮಾಡತಕ್ಕದ್ದು.

ತಾಲೂಕು/ಜಿಲ್ಲಾ /ರಾಜ್ಯ ಸಾಮಾನ್ಯ ರೈತರಿಗೆ ಶುಲ್ಕ ರೂ. 100, ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶುಲ್ಕ ರೂ. 25 ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ರೈತ ಸಂಪರ್ಕ ಕೇಂದ್ರ, ಮಡಿಕೇರಿ/ ಭಾಗಮಂಡಲ/ನಾಪೋಕ್ಲು /ಸಂಪಾಜೆ ಅಥವ ಸಹಾಯಕ ಕೃಷಿ ನಿರ್ದೇಶಕರು, ಮಡಿಕೇರಿ ತಾಲೂಕು ಇವರನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.