ಮಡಿಕೇರಿ, ಆ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಇಸ್ಕಾನ್ ಸಹಕಾರದಲ್ಲಿ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಸೋಮವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ ಮನಸ್ಸಿಗೆ ನೆಮ್ಮದಿ, ಶಾಂತಿ ನೆಲೆಸಲು ಕೃಷ್ಣನನ್ನು ಪ್ರಾರ್ಥಿಸುವದು ವಾಡಿಕೆಯಾಗಿದೆ. ಆ ನಿಟ್ಟಿನಲ್ಲಿ ಕೃಷ್ಣ ಸ್ಮರಣೆ ಸದಾ ಅಗತ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ರೇಷ್ಮೆ ಮಾರಾಟ ಮಂಡಳಿ ರಾಜ್ಯ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ಶ್ರೀಕೃಷ್ಣ ಮಹಾಭಾರತದಲ್ಲಿ ತನ್ನದೇ ಆದ ಪಾತ್ರವನ್ನು ನಿರ್ವಹಿಸಿದ್ದು, ಜನಮೆಚ್ಚುಗೆಗೆ ಪಾತ್ರರಾಗಿದ್ದರು ಎಂದು ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಅವರು ಮಾತನಾಡಿ ಶ್ರೀಕೃಷ್ಣನ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು. ಶ್ರೀಕೃಷ್ಣನ ಜೀವನ ಚರಿತ್ರೆ ಪ್ರತಿಯೊಬ್ಬರಿಗೂ ಜೀವನದಲ್ಲಿ ಪಾಠ ವಿದ್ದಂತೆ ಎಂದು ಅವರು ಹೇಳಿದರು.

ಬೆಂಗಳೂರು ಇಸ್ಕಾನ್ ದೇವಾಲ ಯದ ಧೀನಾನಾಥ್ ಚೈತನ್ಯದಾಸ್ ಶ್ರೀಕೃಷ್ಣನ ಪ್ರವಚನ ಹಾಗೂ ಗಾಯನದ ಮೂಲಕ ಶ್ರೀಕೃಷ್ಣನ ಜೀವನ ಚರಿತ್ರೆ, ಮಹಾಭಾರತದಲ್ಲಿ ನಿರ್ವಹಿಸಿದ ಪಾತ್ರದ ಬಗ್ಗೆ ವರ್ಣಿಸಿದರು.

ಗೊಲ್ಲ ಸಮಾಜದ ಜಿಲ್ಲಾಧ್ಯಕ್ಷರಾದ ಆಚಿರ ಎಸ್.ನಾಣಯ್ಯ ಅವರು ಮಾತನಾಡಿ ಮಹಾಭಾರತದಲ್ಲಿ ಶ್ರೀಕೃಷ್ಣನ ಪಾತ್ರ, ಸಮಾಜಕ್ಕೆ ಶ್ರೀಕೃಷ್ಣನ ಕೊಡುಗೆ, ಆದರ್ಶ ಮತ್ತಿತರ ಬಗ್ಗೆ ಹಲವು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ನಂದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ರಾಮಪ್ಪ, ಜಿಲ್ಲಾ ಖಜಾನಾಧಿಕಾರಿ ಸತೀಶ್, ಕಾರ್ಮಿಕ ಇಲಾಖೆ ಅಧಿಕಾರಿ ಎಂ.ಎಚ್. ರಾಮಕೃಷ್ಣ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಬಿ.ಆರ್. ಗಿರೀಶ್, ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಮತ್ತಿತರರು ಇದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.