ಕುಶಾಲನಗರ, ಆ. 15: ಗುಡ್ಡೆಹೊಸೂರಿನಿಂದ ಹಾರಂಗಿ ಸೇರಿದಂತೆ ಒಟ್ಟು 3 ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಶಂಕುಸ್ಥಾಪನೆ ನೆರವೇರಿಸಿದರು. ಗುಡ್ಡೆಹೊಸೂರು ಸಮೀಪ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಸಚಿವರು, ರೂ. 4.85 ಕೋಟಿ ವೆಚ್ಚದಲ್ಲಿ ಹಾರಂಗಿಯಿಂದ ಗುಡ್ಡೆಹೊಸೂರಿಗೆ ತೆರಳುವ ರಸ್ತೆ ಅಭಿವೃದ್ಧಿ, ರೂ. 2.55 ಲಕ್ಷ ವೆಚ್ಚದಲ್ಲಿ ಗುಮ್ಮನಕೊಲ್ಲಿ ಹಾರಂಗಿ ರಸ್ತೆ ಅಭಿವೃದ್ಧಿ ಮತ್ತು ರಂಗಸಮುದ್ರ ಗ್ರಾಮದಿಂದ ಚಿಕ್ಲಿಹೊಳೆ ಜಲಾಶಯಕ್ಕೆ ರೂ. 1.87 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳ ಲಾಗಿದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಹಾರಂಗಿ ಜಲಾಶಯದ ಉದ್ಯಾನವನ ಮುಂದಿನ 1 ತಿಂಗಳ ಅವಧಿಯಲ್ಲಿ ಪ್ರವಾಸಿಗರಿಗೆ ವೀಕ್ಷಣೆಗೆ ಲಭ್ಯವಾಗಲಿದ್ದು ಈ ನಿಟ್ಟಿನಲ್ಲಿ ಜಲಾಶಯ ಪ್ರದೇಶಕ್ಕೆ ಉತ್ತಮ ಸಂಪರ್ಕ ರಸ್ತೆ ನಿರ್ಮಿಸಲಾಗುವದು. ಗುಣಮಟ್ಟದ ಕಾಮಗಾರಿ ನಡೆಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ರಾಜೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ, ಜಿ.ಪಂ. ಸದಸ್ಯರಾದ ಲತೀಫ್, ಮಂಜುಳಾ, ಕುಮುದ ಧರ್ಮಪ್ಪ, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ, ಜಿಲ್ಲಾಧಿಕಾರಿ ಆರ್.ವಿ. ಡಿಸೋಜ, ತಹಶೀಲ್ದಾರ್ ಮಹೇಶ್, ರೈಲ್ವೇ ಮಂಡಳಿ ಸದಸ್ಯ ಜಿ.ಎಂ. ಮಣಿಕುಮಾರ್, ತಾ.ಪಂ. ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಸದಸ್ಯರಾದ ಪುಷ್ಪಾ, ಗಣೇಶ್, ಹಾರಂಗಿ ಯೋಜನಾ ವೃತ್ತದ ಕಾರ್ಯಪಾಲಕ ಅಭಿಯಂತರ ರಂಗಸ್ವಾಮಿ, ಧರ್ಮರಾಜು, ಜಗದೀಶ್, ನಾಗರಾಜ್, ಕಾಂಗ್ರೆಸ್ ಮುಖಂಡರು ಗಳಾದ ಮಿಟ್ಟು ಚಂಗಪ್ಪ, ಬಿ.ಎಸ್. ಚಂದ್ರಶೇಖರ್ ಮತ್ತಿತರರು ಇದ್ದರು.