ಮಡಿಕೇರಿ: ಇಲ್ಲಿಗೆ ಸಮೀಪದ ಬಾಣೆಮೊಟ್ಟೆ-ದೇಚೂರುನಲ್ಲಿರುವ ಅಂಗನವಾಡಿಯಲ್ಲಿ 71ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಅಂಗನವಾಡಿ ನಿವೃತ್ತ ಶಿಕ್ಷಕಿ ಮನೋರಮಾ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕಿ ಅಮುದ ವಹಿಸಿದ್ದರು. ಪುಟಾಣಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಸಿಹಿ ಹಂಚುವದರೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಪಾಲಿಬೆಟ್ಟ ಪ್ರೌಢಶಾಲೆ: ಪಾಲಿಬೆಟ್ಟದ ಸರಕಾರಿ ಪ್ರೌಢಶಾಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಲಿಯಂಡ ಬೋಪಣ್ಣ ಧ್ವಜಾರೋಹಣ ಮಾಡಿದರು. ತಾಲೂಕು ಪಂಚಾಯಿತಿ ಸದಸ್ಯ ಕುಟ್ಟಂಡ ಅಜಿತ್ ಕರುಂಬಯ್ಯ, ಗ್ರಾ.ಪಂ. ಸದಸ್ಯ ದೀಪಕ್, ಶಾಲಾ ಮುಖ್ಯ ಶಿಕ್ಷಕಿ ಬಿ.ಆರ್. ಗಾಯತ್ರಿ ಹಾಗೂ ಸಹ ಶಿಕ್ಷಕರು ಹಾಜರಿದ್ದರು. ದಿನದ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿದವು.

ಸಂತ ಅಂತೋಣಿ ಶಾಲೆ: ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಕೆ. ರಕ್ಷಿತ್ ಧ್ವಜಾರೋಹಣ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭ ಶಾಲೆಯ ಬಡ ವಿದ್ಯಾರ್ಥಿಗಳಿಗೆ ಸುಂಟಿಕೊಪ್ಪ ಗ್ರಾಮಾಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಮಂಜುನಾಥ್ ಹಾಗೂ ಇತರ ಪದಾಧಿಕಾರಿಗಳು ಸಮವಸ್ತ್ರ ವಿತರಿಸಿದರು.

ಕನ್ನಿಕಾ ವಿವಿದೋದ್ದೇಶ ಸಹಕಾರ ಸಂಘ: ಕುಶಾಲನಗರ ಕನ್ನಿಕಾ ವಿವಿದೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಡಾ ಅಧ್ಯಕ್ಷ ಬಿ.ಜಿ. ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಕೆ.ಆರ್. ರವಿಕುಮಾರ್, ಕೃಷ್ಣಮೂರ್ತಿ, ಅಮೃತ್‍ರಾಜ್, ವಿ.ಆರ್. ಮಂಜುನಾಥ್, ಸ್ಥಳೀಯರಾದ ಡಾ. ಪ್ರವೀಣ್, ವಕೀಲ ನಂದ ಮತ್ತಿತರರು ಇದ್ದರು.

ಈ ಸಂದರ್ಭ ಕುಡಾ ಅಧ್ಯಕ್ಷರಾದ ಬಿ.ಜಿ. ಮಂಜುನಾಥ್ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.ಕೊಡವ ಸಮಾಜ: ಕುಶಾಲನಗರ ಕೊಡವ ಸಮಾಜದ ಆಶ್ರಯದಲ್ಲಿ ಸಮಾಜದ ಅಧ್ಯಕ್ಷ ಮಂಡೇಪಂಡ ಬೋಸ್ ಮೊಣ್ಣಪ್ಪ ಧ್ವಜಾರೋಹಣ ನೆರವೇರಿಸಿದರು. ಪಟ್ಟಣದ ಗಣಪತಿ ದೇವಾಲಯದ ಬಳಿಯಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಸ್ಮಾರಕಕ್ಕೆ ಹೂಹಾರ ಹಾಕಿ ಸಮಾಜದ ಸದಸ್ಯರು ಗೌರವ ಸಲ್ಲಿಸಿದರು.

ಈ ಸಂದರ್ಭ ಗೌರವ ಕಾರ್ಯದರ್ಶಿ ಪುಲಿಯಂಡ ಚಂಗಪ್ಪ, ಗೌಡಂಡ ದೇವಯ್ಯ, ನಿರ್ದೇಶಕರು ಇದ್ದರು.

ಪತ್ರಕರ್ತರ ಸಂಘ: ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಸಂಘದ ಅಧ್ಯಕ್ಷರಾದ ಎಂ.ಎನ್. ಚಂದ್ರಮೋಹನ್ ಧ್ವಜಾರೋಹಣ ನೆರವೇರಿಸಿದರು. ಸಂಘದ ಸದಸ್ಯರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಎಸ್. ಲೋಕೇಶ್ ಸಾಗರ್ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಕಾರ್ಯದರ್ಶಿ ನಾಗರಾಜಶೆಟ್ಟಿ ಮತ್ತು ಸದಸ್ಯರುಗಳಿದ್ದರು.ಜೆಎಂಎಫ್‍ಸಿ ನ್ಯಾಯಾಲಯ: ಕುಶಾಲನಗರ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಧ್ವಜಾರೋಹಣ ನೆರವೇರಿಸಿದರು. ಸರಕಾರಿ ಅಭಿಯೋಜಕ ಯಾಸಿನ್ ಅಹಮ್ಮದ್, ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರಬಾಬು, ಸಂಘದ ಸದಸ್ಯರು, ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

ನಾಪೆÇೀಕ್ಲು ಹೈಲ್ಯಾಂಡರ್ಸ್ ಕ್ಲಬ್‍ನಿಂದ: ಕಕ್ಕಬೆ ದಿ. ಹೈಲ್ಯಾಂಡರ್ಸ್ ಕ್ಲಬ್ ವತಿಯಿಂದ 71ನೇ ಸ್ವಾತಂತ್ರ್ಯೋತ್ಸವವನ್ನು ನಡೆಸಲಾಯಿತು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕ್ಲಬ್‍ನ ಅಧ್ಯಕ್ಷ ಕಲ್ಯಾಟಂಡ ರಘು ತಮ್ಮಯ್ಯ ಸ್ವಾತಂತ್ರ್ಯೋತ್ಸವ ಆಚರಣೆ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಬಾರದು. ಎಲ್ಲಾ ಸಂಘ-ಸಂಸ್ಥೆಗಳಲ್ಲಿಯೂ ಸ್ವಾತಂತ್ರ್ಯೋತ್ಸವ ಆಚರಿಸುವ ಮೂಲಕ ಹಿರಿಯರ ತ್ಯಾಗ -ಬಲಿದಾನವನ್ನು ಸ್ಮರಿಸಿಕೊಳ್ಳಬೇಕು. ದೇಶ ಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭ ಕ್ಲಬ್‍ನ ಕಾರ್ಯದರ್ಶಿ ಅರೆಯಡ ಜೀವನ್, ಖಜಾಂಚಿ ಕಲಿಯಂಡ ಸುನಂದಾ, ಸದಸ್ಯರಾದ ಅಪ್ಪಾರಂಡ ಸೀನು ನಂಜಪ್ಪ, ಬೊಳಿಯಾಡಿರ ಸಂತು ಸುಬ್ರಮಣಿ, ಮೇಚಂಡ ಜಯ, ಕಲ್ಯಾಟಂಡ ಸುದಾ ಗಣಪತಿ, ಅಂಜಪರವಂಡ ಕುಶಾಲಪ್ಪ, ಕಲಿಯಂಡ ಗಿರೀಶ್, ರೋಷನ್, ಸಂಪನ್, ಅಯ್ಯನೆರವಂಡ ಮನು, ವ್ಯವಸ್ಥಾಪಕ ಕಿರಣ್ ಇದ್ದರು.

ಬಲ್ಲಮಾವಟಿ: ನಾಪೆÇೀಕ್ಲು ಸಮೀಪದ ಬಲ್ಲಮಾವಟಿ ನೇತಾಜಿ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಛದ್ಮವೇಷ ಸ್ಪರ್ಧೆ ನಡೆಯಿತು.

ಆಟೋ ಚಾಲಕರ ಸಂಘ: ಸಿದ್ದಾಪುರ ಆಟೋ ಚಾಲಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಿದ್ದಾಪುರ ಆಟೋ ನಿಲ್ದಾಣದಲ್ಲಿ ಪೊಲೀಸ್ ಠಾಣೆಯ ಎಎಸ್‍ಐ ವಸಂತ್ ಕುಮಾರ್ ಧ್ವಜಾರೋಹಣ ಮಾಡಿದರು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಸಿಹಿ ಹಂಚಿದರು. ಸಂಘದ ಅಧ್ಯಕ್ಷ ಎಂ.ಆರ್. ಸಲೀಂ ನೇತ್ರತ್ವದಲ್ಲಿ ನಡೆದ ಸಮಾರಂಭದಲ್ಲಿ ಉಪಾಧ್ಯಕ್ಷ ಗುರು, ಖಜಾಂಚಿ ಕಾರ್ತಿಕ್, ಕಾರ್ಯದರ್ಶಿಗಳಾದ ರಶಾದ್, ರವೂಫ್, ಅಪ್ಸಲ್ ಮತ್ತಿತರರು ಹಾಜರಿದ್ದು ಸಮುದಾಯ ಅರೋಗ್ಯ ಕೇಂದ್ರದ ಒಳ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಿದರು.ಭಾರತ ಮಾತಾ ವಿದ್ಯಾಸಂಸ್ಥೆ: ಕೊಪ್ಪ ಭಾರತ ಮಾತಾ ಸಂಯುಕ್ತ ಪದವಿಪೂರ್ವ ಕಾಲೇಜು ಆವರಣದಲ್ಲಿ ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್. ಚಿಣ್ಣಪ್ಪ ಧ್ವಜಾರೋಹಣ ನೆರವೇರಿಸಿದರು. ಕಾಲೇಜು ಪ್ರಾಂಶುಪಾಲ ಜೋಸೆಫ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಎಂ.ಎಸ್.ಚಿಣ್ಣಪ್ಪ, ದೇಶದ ಸಮಗ್ರತೆಯನ್ನು ಕಾಪಾಡುವಲ್ಲಿ ಪ್ರತಿಯೊಬ್ಬರೂ ತಮ್ಮನ್ನು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಗೆ ಮಾರುಹೋಗದೆ ಸೇವಾ ಮನೋಭಾವನೆ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಫಾ. ರೆನಿ, ಸಿಸ್ಟರ್ ಟ್ರಿಸಾ, ಸಿನಿ ಮ್ಯಾಥ್ಯು ಇದ್ದರು. ಪಥಸಂಚನ ನಡೆಯಿತು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.

ಪ್ರೆಸ್‍ಕ್ಲಬ್ ಟ್ರಸ್ಟ್: ಕುಶಾಲನಗರ ಪ್ರೆಸ್‍ಕ್ಲಬ್ ಟ್ರಸ್ಟ್ ಕಚೇರಿಯಲ್ಲಿ ಅಧ್ಯಕ್ಷ ಹೆಚ್.ಎಂ. ರಘು ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ತ್ಯಾಗರಾಜು ಮತ್ತು ಸದಸ್ಯರು ಇದ್ದರು.ದಾರಸ್ಸಲಾಂ ಅರೇಬಿಕ್ ಪ್ರೌಢಶಾಲೆ: ಸಿದ್ದಾಪುರ-ನೆಲ್ಲಿಹುದಿಕೇರಿ ದಾರಸ್ಸಲಾಂ ಅರೇಬಿಕ್ ಪ್ರೌಢಶಾಲೆಯಲ್ಲಿ ಎಸ್.ಕೆ. ಬಿ.ವಿ. ವಿದ್ಯಾರ್ಥಿ ಸಂಘಟನೆ ವತಿಯಿಂದ ಮದರಸದ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿದರು.

ಈ ಸಂದರ್ಭ ಮುಸ್ಲಿಂ ಜಮಾಅತ್ ಅಧ್ಯಕ್ಷ ಒ.ಎಂ. ಅಬ್ದುಲ್ಲಾ ಹಾಜಿ, ಕಾರ್ಯದರ್ಶಿ ಮಹಮ್ಮದ್ ಅಲಿ, ಗ್ರಾಮ ಪಂಚಾಯಿತಿ ಸದಸ್ಯ ಎ.ಕೆ. ಹಕೀಂ, ಪ್ರಮುಖರಾದ ತಮ್ಲೀಖ್ ದಾರಿಮಿ, ಮೊಹಿದ್ದೀನ್, ಮಾಣಿ ಮಾಸ್ಟರ್, ಹನೀಫ್ ಪೈಝಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಗರಗಂದೂರು: ಗರಗಂದೂರಿನ ಎ. ಮಜ್ಜಿದ್ ನೂರ್ ಮದ್ರಸದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷ ಕೆ. ಹನೀಫ್ ನೇರವೇರಿಸಿದರು.

ಮಸೀದಿ ಕಾರ್ಯದರ್ಶಿ ಅಬ್ದುಲ್ ರಹೆಮಾನ್, ಸದಸ್ಯರುಗಳಾದ ಸಲೀಂ, ಇಬ್ರಾಹಿಂ, ಶಾದಿಲ್ ಹಾಗೂ ಧರ್ಮಗುರುಗಳಾದ ಅಬ್ದುಲ್ ಸಹದಿ ಈ ಸಂದರ್ಭದಲ್ಲಿ ಹಾಜರಿದ್ದರು.

ಸರಕಾರಿ ಪ್ರೌಢಶಾಲೆ: ನಾಪೋಕ್ಲುವಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಎನ್‍ಸಿಸಿ ಬ್ಯಾಂಡ್‍ನೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ತೆರಳಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಆ ಬಳಿಕ ನಡೆದ ಸಭೆಯ ಅಧ್ಯಕ್ಷತೆಯನ್ನು ಎಸ್‍ಡಿಎಂಸಿ ಅಧ್ಯಕ್ಷ ಕೆ.ಪಿ. ಹಸೈನಾರ್ ವಹಿಸಿದ್ದರು. ಮುಖ್ಯ ಅತಿಥಿ ನಾಪೋಕ್ಲು ಗ್ರಾಮಪಂಚಾಯಿತಿ ಸದಸ್ಯ ಮಾಚೆಟ್ಟೀರ ಕುಶಾಲಪ್ಪ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಭಾಷಣಕಾರರಾಗಿ ಶಿಕ್ಷಕಿ ಕಸ್ತೂರಿ ತಿಮ್ಮಯ್ಯ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ದೇಶಭಕ್ತಿಗೀತೆ, ದಿನದ ಮಹತ್ವದ ಕುರಿತು ಭಾಷಣ ಮತ್ತಿತರ ಕಾರ್ಯಕ್ರಮಗಳು ಜರುಗಿದವು. ಆ ಬಳಿಕ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಉಪ ಪ್ರಾಂಶುಪಾಲೆ ಬಡ್ಡೀರ ನಳಿನಿ, ಎಸ್‍ಡಿಎಂಸಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

ತ್ರಿನೇತ್ರ ವಾಹನ ಮಾಲೀಕರ-ಚಾಲಕರ ಸಂಘ: ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಯಿತು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ಶಿಬಿರವನ್ನು ಬ್ಯಾಡ್ಮಿಂಟನ್ ಕ್ರೀಡಾಪಟು ಚೌರೀರ ತಿಮ್ಮಯ್ಯ ಉದ್ಘಾಟಿಸಿದರು. ಮಡಿಕೇರಿ ವೈದ್ಯಾ ಡಾ. ಮೋಹನ್ ಅಪ್ಪಾಜಿ ಮಾತನಾಡಿದರು. ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಬುಟ್ಟಂಡ ಸುನೀಲ್ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ, ಸದಸ್ಯೆ ಸುಜಾತ, ಜಯಂತಿ, ಪಶು ವೈದ್ಯಾಧಿಕಾರಿ ಡಾ. ಪ್ರಸನ್ನ, ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅನುಷಾ, ಪಂದಿಯಂಡ ರಮೇಶ್, ಡಾ. ಗೌರು ಸ್ವಾಮಿ, ಪೊಲೀಸ್ ಉಪಠಾಣೆ ಸಿಬ್ಬಂದಿ ಸೈಮನ್, ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಉಪಾಧ್ಯಕ್ಷ ಮಣಿ, ಗೌರವಾಧ್ಯಕ್ಷ ಕುಂಞÂರಾಮ, ಕಾರ್ಯದರ್ಶಿ ಅಶ್ವಥ್, ಪುರುಷೋತ್ತಮ್, ಖಜಾಂಚಿ ಅಬು ಹಾಗೂ ಸದಸ್ಯರು ಹಾಜರಿದ್ದರು.

ಈ ಸಂದರ್ಭ ಬ್ಯಾಡ್ಮಿಂಟನ್ ಕ್ರೀಡಾಪಟು ಚೌರೀರ ತಿಮ್ಮಯ್ಯ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಶಿಬಿರದಲ್ಲಿ ಗಂಟಲು, ತಲೆನೋವು, ಕಿವುಡುತನ, ಕುತ್ತಿಗೆ ನೋವಿನ ತಪಾಸಣೆ ನಡೆಸಲಾಯಿತು. 34 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.ಜಾಮೀಯಾ ಮಸೀದಿ: ಕುಶಾಲನಗರ ಜಾಮೀಯಾ ಮಸೀದಿಯಲ್ಲಿ ನಿವೃತ್ತ ಯೋಧ ಶಫಿ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಆಡಳಿತ ಮಂಡಳಿ ಅಧ್ಯಕ್ಷ ಅಲಿಮ ಮತ್ತು ಸದಸ್ಯರು ಇದ್ದರು. ಶಾಲಾ ಮಕ್ಕಳಿಂದ ದೇಶಭಕ್ತಿ ಗೀತೆ ಗಾಯನ ನಡೆಯಿತು.

ಮಾಜಿ ಸೈನಿಕರ ಸಂಘ: ಕುಶಾಲನಗರ ಮಾಜಿ ಸೈನಿಕ ಸಂಘದ ಕಚೇರಿಯಲ್ಲಿ ನಿವೃತ್ತ ಕ್ಯಾಪ್ಟನ್ ಸೋಮಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಸಂಘದ ಅಧ್ಯಕ್ಷರಾದ ಸಾರ್ಜೆಂಟ್ ಎಂ.ಎನ್. ಮೊಣ್ಣಪ್ಪ ಮತ್ತು ಸದಸ್ಯರು ಇದ್ದರು.ಗುಡ್ಡೆಹೊಸೂರು: ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷ ಬಿ.ಎಸ್. ದಿನೇಶ್ ಧ್ವಜಾರೋಹಣ ನೆರವೇರಿಸಿದರು. ನಂತರ ಶಾಲಾ ಮಕ್ಕಳು, ಶಿಕ್ಷಕ ವೃಂದ ಮತ್ತು ಪೋಷಕರು ಸೇರಿ ಗ್ರಾಮದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು.

ನಂತರ ಶಾಲಾ ಮಕ್ಕಳಿಗೆ ವಿವಿಧ ಕ್ರೀಡಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭ ಸಿ.ಆರ್.ಪಿ. ಸತ್ಯನಾರಾಯಣ ಮತ್ತು ಐ.ಆರ್.ಪಿ. ವೆಂಕಟೇಶ್ ಹಾಜರಿದ್ದರು. ಗ್ರಾ.ಪಂ. ಅಧ್ಯಕ್ಷೆ ಭಾರತಿ ಶಾಲಾ ಮಕ್ಕಳಿಗೆ ಉಚಿತವಾಗಿ ಗುರುತಿನ ಚೀಟಿಯನ್ನು ವಿತರಿಸಿದರು. ಅಲ್ಲದೆ ಬಸವನಹಳ್ಳಿ ನಿವಾಸಿಗಳಾದ ಅನಿಲ್ ಕುಮಾರ್ ಮತ್ತು ಯೋಗೆಶ್ ಅವರು ಶಾಲೆಯ ಮಕ್ಕಳಿಗೆ ಟೈ ಮತ್ತು ಬೇಲ್ಟ್ ವಿತರಿಸಿದರು. ಮುಖ್ಯ ಶಿಕ್ಷಕ ಸಣ್ಣಸ್ವಾಮಿ ಸ್ವಾಗತಿಸಿದರು. ಶಿಕ್ಷಕಿ ಮರಿಯಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಯಶುಮತಿ ವಂದಿಸಿದರು.

ಚಿಕ್ಕಅಳುವಾರ: ಚಿಕ್ಕಅಳುವಾರದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ 71ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನಿವೃತ್ತ ಸೇನಾಧಿಕಾರಿ ಡಿ.ಕೆ. ಚಿಣ್ಣಪ್ಪ ನೆರವೇರಿಸಿ ಮಾತನಾಡಿದರು.

ಅಧ್ಯಕ್ಷತೆಯನ್ನು ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ. ಪಿ.ಎಲ್. ಧರ್ಮ ವಹಿಸಿದ್ದರು. ಜೀವ ರಸಾಯನ ಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಕೆ.ಎಸ್. ಚಂದ್ರಶೇಖರಯ್ಯ, ಗಣಕ ವಿಜ್ಞಾನ ವಿಭಾಗದ ನಿರ್ದೇಶಕ ಪ್ರೊ. ವಾದಿರಾಜ್, ದೈಹಿಕ ಶಿಕ್ಷಣ ವಿಭಾಗದ ಉಪ ನಿರ್ದೇಶಕ ಡಾ. ಟಿ. ಕೇಶವಮೂರ್ತಿ, ಸಹಾಯಕ ಗ್ರಂಥಪಾಲಕ ಜಯಪ್ಪ, ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರುಗಳಾದ ಡಾ. ಚಂದ್ರಶೇಖರ ಜೋಷಿ, ಬಿ.ಎಸ್. ಶ್ರೀನಾಥ್, ಡಾ. ಕೆ.ಕೆ. ಧರ್ಮಪ್ಪ, ರಾಜಕುಮಾರ್ ಮೇಟಿ, ಡಾ. ಬಿ.ಎಸ್. ಗುಣಶ್ರೀ, ಉಪನ್ಯಾಸಕ ವೃಂದ, ಆಡಳಿತ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.

ಕಳತ್ಮಾಡು: ಶ್ರೀಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳತ್ಮಾಡುವಿನಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ಶ್ರಮದಾನವನ್ನು ಕೂಡ ಮಾಡಲಾಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷೆ ಎಂ.ಕೆ. ತುಳಸಿ ಧ್ವಜಾರೋಹಣ ನಡೆಸಿಕೊಟ್ಟರು. ಗ್ರಾ.ಪಂ. ಸದಸ್ಯರಾದ ಕೊಲ್ಲೀರ ಧನು ಪೂಣಚ್ಚ, ಕಾವೇರಮ್ಮ ಮತ್ತು ಶಾರದ ಹಾಗೂ ಶಾಲಾ ಕ್ರೀಡಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಹಾಜರಿದ್ದರು.

ಧರ್ಮಸ್ಥಳ ಸಂಘದ ಪದಾಧಿಕಾರಿಗಳು ಶಾಲೆಗೆ ಎಂಟು ಸಾವಿರ ಮೌಲ್ಯದ ಬೀರು ಮತ್ತು ಕುರ್ಚಿಗಳನ್ನು ವಿತರಿಸಿದರು. ವೀರಾಜಪೇಟೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ, ಮುಖ್ಯ ಶಿಕ್ಷಕ ವಿನೋದ್, ಸಹ ಶಿಕ್ಷಕಿ ತಾರಾಮಣಿ, ಭಾಗ್ಯವತಿ, ಅಂಗನವಾಡಿ ಕಾರ್ಯಕರ್ತೆ ನೇತ್ರಾವತಿ, ಸಹಾಯಕಿ ಕವಿತಾ ಮತ್ತು ಪೋಷಕರು ಹಾಜರಿದ್ದರು.ಮೂರ್ನಾಡು ಶಾಲೆ: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ ಧ್ವಜಾರೋಹಣ ನೆರವೇರಿಸಿ ದಿನದ ಮಹತ್ವದ ಕುರಿತು ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯ ರವಿ, ಸುಜಾತ, ಜಯಂತಿ, ಶಾಲಾ ಮುಖ್ಯ ಶಿಕ್ಷಕಿ ಸರೋಜ, ಎಸ್‍ಡಿಎಂಸಿ ಸದಸ್ಯರು ಹಾಜರಿದ್ದರು. ಮಕ್ಕಳಿಂದ ಭಾಷಣ, ದೇಶಭಕ್ತಿ ಗೀತೆಗಳ ಗಾಯನ, ನೃತ್ಯ ಕಾರ್ಯಕ್ರಮ ಜರುಗಿತು. ಸ್ವಾತಂತ್ರ ದಿನಾಚರಣೆ ಅಂಗವಾಗಿ ಮಕ್ಕಳು ಪಟ್ಟಣದ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿದರು.

ಈ ಸಂದರ್ಭ ಶಾಲಾ ಶಿಕ್ಷಕ ವೃಂದ ಹಾಗೂ ಎಸ್‍ಡಿಎಂಸಿ ವತಿಯಿಂದ ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಎ.ಟಿ. ಸುರೇಶ್ ಹಾಗೂ ಸದಸ್ಯೆ ದಮಯಂತಿ ಅವರನ್ನು ಸನ್ಮಾನಿಸಲಾಯಿತು. ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ದಿನೇಶ್ ಪೆಗ್ಗೋಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮರ್ಕಝ್ ಪಬ್ಲಿಕ್ ಶಾಲೆ: ಕೊಟ್ಟಮುಡಿಯ ಮರ್ಕಝ್ ಪಬ್ಲಿಕ್ ಶಾಲೆ ಹಾಗೂ ಬಾಲಕಿಯರ ಪದವಿಪೂರ್ವ ಕಾಲೇಜಿನ ವತಿಯಿಂದ 71ನೇ ಸ್ವಾತಂತ್ರ್ಯೋತ್ಸವÀನ್ನು ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾಸಂಸ್ಥೆಯ ನಿರ್ದೇಶಕ ಪಿ.ಎ. ಯೂಸುಫ್ ಧ್ವಜಾರೋಹಣ ನೆರವೇರಿಸಿದರು. ಪ್ರಾಂಶುಪಾಲ ನಜóರಿಯ, ಹೊದವಾಡ ಗ್ರಾ.ಪಂ. ಸದಸ್ಯ ಪಿ.ಎ. ಶಾಫಿ, ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಪ್ರಮುಖರು ಹಾಗೂ ಶಿಕ್ಷಕ ವೃಂದ ದಿನದ ಮಹತ್ವದ ಕುರಿತು ಮಾತನಾಡಿದರು.

ನಂತರ ವಿದ್ಯಾರ್ಥಿಗಳು ಭಾಷಣ ಮತ್ತು ಹಾಡುಗಾರಿಕೆ ಮೂಲಕ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡರು. ಗಣ್ಯರು ವಿಜೇತರಿಗೆ ಬಹುಮಾನ ವಿತರಿಸಿದರು.ವಾಸವಿ ಯುವಜನ ಸಂಘ: ಕುಶಾಲನಗರ ವಾಸವಿ ಯುವಜನ ಸಂಘದಿಂದ 71ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಸಂಘದ ಮಾಜಿ ಅಧ್ಯಕ್ಷ ಎಸ್.ಎನ್. ರಾಜೇಂದ್ರ ಧ್ವಜಾರೋಹಣ ನೆರವೇರಿಸಿದರು. ಯುವಜನ ಸಂಘದ ಅಧ್ಯಕ್ಷ ವಿ.ಆರ್. ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ಕನ್ನಿಕಾ ವಿವಿದೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷ ಅಮೃತ್‍ರಾಜ್, ಪಟ್ಟಣ ಪಂಚಾಯಿತಿ ಸದಸ್ಯೆ ರಶ್ಮಿ ಅಮೃತ್, ಹಿರಿಯರಾದ ವಿ.ಎನ್. ಪ್ರಭಾಕರ್, ಸಂಘದ ಪದಾಧಿಕಾರಿಗಳಾದ ನಾಗಪ್ರವೀಣ್, ವೈಶಾಖ್, ಎ.ಎನ್. ಕುಮಾರ್, ಪ್ರವೀಣ್ ಇದ್ದರು.