ನಾಪೆÇೀಕ್ಲು, ಆ. 17: ಶಾಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲ. ಬೆಟ್ಟದಿಂದ ಹರಿದು ಬರುವ ನೀರು ಪೂರೈಕೆಯಲ್ಲಿ ಪದೇ ಪದೇ ವ್ಯತ್ಯಯವಾಗುತ್ತಿದೆ. ನೀರಿನ ಸೌಲಭ್ಯ ಕಲ್ಪಿಸಿ ಎಂದು ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯಲ್ಲಿ ಆಯೋಜಿಸಿದ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ ಘಟನೆ ನಡೆಯಿತು.

ನೆಲಜಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ದೇಚಮ್ಮ ನೀರಿಗಾಗಿ ಮನವಿ ಮಾಡಿದರೆ, ಮಳೆಗಾಲದಲ್ಲಿ ಶಾಲಾ ಗ್ರಂಥಾಲಯ ಕುಸಿದು ಬೀಳುವ ಸ್ಥಿತಿಯಲ್ಲಿದೆ ಶಾಲೆಗೆ ಸುಣ್ಣಬಣ್ಣ ಇಲ್ಲ. ಸೂಕ್ತ ವ್ಯವಸ್ಥೆ ಮಾಡಿ ಎಂದು ಮತ್ತೋರ್ವ ವಿದ್ಯಾರ್ಥಿನಿ ಭವ್ಯ ಮನವಿ ಮಾಡಿದಳು. ಗಂಡು ಮಕ್ಕಳಿಗೆ ಶೌಚಾಲಯವಿಲ್ಲ. ಶೌಚಾಲಯ ನಿರ್ಮಿಸಿಕೊಡಿ ಶಾಲೆಗೆ ಕಂಪ್ಯೂಟರ್ ವ್ಯವಸ್ಥೆ ಒದಗಿಸಿ ಎಂದು ಗ್ರಾಮದ ನೇತಾಜಿ ಪ್ರೌಢಶಾಲೆಯ ವಿದ್ಯಾರ್ಥಿ ಮಹೇಶ್ ಮನವಿ ಸಲ್ಲಿಸಿದರೆ, ಪುಲಿಕೋಟು ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಭೂಮಿಕ ಶಾಲೆಗೆ ತಡೆಗೋಡೆ ನಿರ್ಮಿಸಿಕೊಡಿ ಊಟ ಮಾಡಿ ಕೈತೊಳೆಯಲು ಬೇಸಿನ್ ಬೇಕು ಎಂದು ಬೇಡಿಕೆ ಇಟ್ಟಳು. ಇವು ನಡೆದದ್ದು ಸಮೀಪದ ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯ ಸಭಾಂಗಣದಲ್ಲಿ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಶಾಲೆಗೆ ಅಗತ್ಯವಿರುವ ಬೇಡಿಕೆಗಳನ್ನು ಪಂಚಾಯಿತಿ ಸದಸ್ಯರ ಮುಂದಿಟ್ಟರು.

ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರವಂಡ ಸರಸು ಪೆಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಂಚಾಯಿತಿಗೆ ಸಂಪನ್ಮೂಲದ ಕೊರತೆ ಇದ್ದು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತೊಡಕುಂಟಾಗಿದೆ ಎಂದು ಮಾಹಿತಿ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪಿಡಿಓ ವೀಣಾ ಕುಮಾರಿ ಶಾಲೆಗಳ ಸಮಸ್ಯೆಯೊಂದಿಗೆ ಮನೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆಯೂ ಪ್ರತಿಕ್ರಿಯಿಸಿ ಎಂದರು. ಪೇರೂರು ಗ್ರಾಮದಿಂದ ನೆಲಜಿ ಶಾಲೆಗೆ ಬರುವ ಮಕ್ಕಳಿಗೆ ರಸ್ತೆ ಸಮಸ್ಯೆ ಎದುರಾಗಿದೆ. ರಸ್ತೆ ಸಂಪೂರ್ಣ ಹದಗೆಟ್ಟಿದೆ. ದುರಸ್ತಿಪಡಿಸಿ ಎಂದು ಮಕ್ಕಳು ಕೋರಿದರು. ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ನೆಲಜಿ - ಪೇರೂರು ಗ್ರಾಮಗಳ ನಡುವಿನ 12.5 ಕಿ.ಮೀ. ರಸ್ತೆ ಕಾಮಗಾರಿಯನ್ನು ಕೈಗೊಳ್ಳಲಾಗುವದು ಎಂದು ಪಂಚಾಯಿತಿ ಅಧ್ಯಕ್ಷೆ ಮಾಹಿತಿ ನೀಡಿದರು. ಪಿಡಿಓ ವೀಣಾ ಕುಮಾರಿ ಮಾತನಾಡಿ ಗ್ರಾಮ ಪಂಚಾಯಿತಿಗೆ ರೂ. 10 ಲಕ್ಷ ಅನುದಾನ ಬರತ್ತಿದ್ದು, ಅದರಲ್ಲಿ ಶೇ. 60 ಹಣ ವಿದ್ಯುತ್‍ಬಿಲ್ ಪಾವತಿಸಲು ಹಾಗೂ ಶೇ. 40 ರಷ್ಟು ಹಣ ವೇತನ ಪಾವತಿಸಲು ಖರ್ಚಾಗುತ್ತಿದೆ. 14ನೇ ಹಣಕಾಸು ಯೋಜನೆಯಡಿ ಕ್ರಿಯಾಯೋಜನೆ ತಯಾರಿಸಿ ದೊರೆತ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವದು ಎಂದರು.

ವೇದಿಕೆಯಲ್ಲಿ ಉಪಾಧ್ಯಕ್ಷೆ ದೇವಕಿ, ಸದಸ್ಯರಾದ ಬೈರುಡ ಮುತ್ತಪ್ಪ, ಚಂಗೇಟಿರ ಕುಮಾರ್ ಸೋಮಣ್ಣ, ಪಾಪು, ಧರಣಿ, ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕುಮಾರ ಸ್ವಾಮಿ ಉಪಸ್ಥಿತರಿದ್ದರು. ಪಿಡಿಓ ವೀಣಾ ಕುಮಾರಿ ಸ್ವಾಗತಿಸಿ ವಂದಿಸಿದರು.