*ಗೋಣಿಕೊಪ್ಪಲು, ಆ. 18: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಸುವರ್ಣ ಮಹೋತ್ಸವದ ಪ್ರಯುಕ್ತ ತಾ. 22 ರಂದು ಬೆಳಿಗ್ಗೆ 10 ಗಂಟೆಗೆ ದಿ. ಡಾ. ಎಂ.ಎಂ. ಚಂಗಪ್ಪ ಅವರ ಜ್ಞಾಪಕಾರ್ಥ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ.

ಜಿಲ್ಲೆಯ ಪದವಿಪೂರ್ವ, ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಶಿಕ್ಷಣ ಕಾಲೇಜಿನ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದ್ದು, ವಿಜೇತರಿಗೆ ಆಕರ್ಷಕ ಟ್ರೋಫಿ ಮತ್ತು ನಗದು ಬಹುಮಾನ ನೀಡಲಾಗುವದು. ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆ ನೀಡಲಾಗುವದು ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಾಂಶುಪಾಲ ಪಟ್ಟಡ ಪೂವಣ್ಣ ತಿಳಿಸಿದ್ದಾರೆ.