ಸೋಮವಾರಪೇಟೆ, ಆ. 19: ವಿವಿಧ ಸಮುದಾಯಗಳ ಸಾಂಪ್ರದಾಯಿಕ ಆಚರಣೆಗಳಿಂದ ಭಾರತ ದೇಶ ಸಾಂಸ್ಕøತಿಕವಾಗಿ ಅತ್ಯಂತ ಶ್ರೀಮಂತವಾಗಿದೆ ಎಂದು ಮಾಜಿ ಸಚಿವ ಬಿ.ಎ. ಜೀವಿಜಯ ಅಭಿಪ್ರಾಯಿಸಿದರು. ತಾಲೂಕು ಶ್ರೀ ನಾರಾಯಣಗುರು ಸೇವಾ ಸಮಿತಿಯು ತುಳುನಾಡ ಸಿರಿ ಬಿಲ್ಲವ ಮಹಿಳಾ ಸಂಘದ ಸಹಯೋಗದೊಂದಿಗೆ ಸ್ಥಳೀಯ ಜಾನಕಿ ಕನ್ವೆನ್‍ಷನ್ ಹಾಲ್‍ನಲ್ಲಿ ಆಯೋಜಿಸಿದ್ದ ಆಟಿ ಸಂಭ್ರಮೋತ್ಸವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.ಸಮಾನತೆಯ ಹರಿಕಾರರಾದ ನಾರಾಯಣಗುರುಗಳನ್ನು ಗುರುವಾಗಿ ಸ್ವೀಕರಿಸಿ, ಆ ಮೂಲಕ ಸಂಘಟನೆಯನ್ನು ಬಲಿಷ್ಠವನ್ನಾಗಿಸುವ ಪ್ರಯತ್ನ ಶ್ಲಾಘನೀಯ. ಪ್ರತಿಯೊಬ್ಬರೂ ದ್ವೇಷ, ಅಸೂಯೆಗಳನ್ನು ಬದಿಗೊತ್ತಿ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುವಂತಾಗಬೇಕೆಂದು ಕರೆ ನೀಡಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್ ಮಾತನಾಡಿ, ಸಮಾಜ ಸಂಘಟನೆಯೊಂದಿಗೆ ಬಲಿಷ್ಠವಾದರೆ ತಮ್ಮ ಸಮಾಜದ ಬೇಕು, ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ. ಪ್ರತಿಯೊಂದು ಕುಟುಂಬಗಳು ಸಂಘಟನೆಯೊಂದಿಗೆ ಕೈಜೋಡಿಸಬೇಕು. ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸದೊಂದಿಗೆ ಉತ್ತಮ ಸಂಸ್ಕಾರಗಳನ್ನು ಕಲಿಸುವ ಮೂಲಕ ಸಮಾಜದ ಆಸ್ತಿಯನ್ನಾಗಿಸುವ ಪ್ರಯತ್ನ ಪೋಷಕರಿಂದಾಗಬೇಕು. ಹಿಂದುಳಿದ ವರ್ಗದಲ್ಲಿ ಜನಿಸಿದ ಮಕ್ಕಳು ಉನ್ನತ ಶಿಕ್ಷಣ ಪಡೆಯುವ ಮೂಲಕ ಉನ್ನತ

(ಮೊದಲ ಪುಟದಿಂದ) ಹುದ್ದೆಯನ್ನು ಅಲಂಕರಿಸುವಂತಾಗಬೇಕೆಂದರು.

ಜೆಡಿಎಸ್ ಜಿಲ್ಲಾ ಉಸ್ತುವಾರಿ ವಿ.ಎಂ. ವಿಜಯ ಮಾತನಾಡಿ, ಶ್ರೀ ನಾರಾಯಣಗುರುಗಳ ತತ್ವಾದÀರ್ಶಗಳು ಸಾರ್ವಕಾಲಿಕವಾಗಿದ್ದು ಅದನ್ನು ಪ್ರತಿಯೊಬ್ಬರೂ ಪಾಲಿಸು ವಂತಾಗಬೇಕೆಂದರು. ಸಮಾರಂಭವನ್ನು ಉದ್ಘಾಟಿಸಿ ಬೆಂಗಳೂರಿನ ಗೊಕುಲ್‍ದಾಸ್ ಎಕ್ಸ್‍ಪೋಟ್ರ್ಸ್ ಕಂಪೆನಿಯ ಉಪಾಧ್ಯಕ್ಷ ಸಿ. ಲಕ್ಷ್ಮಣ್ ಪೂಜಾರಿ ಮಾತನಾಡಿದರು.

ಅಧ್ಯಕ್ಷತೆಯನ್ನು ನಾರಾಯಣಗುರು ಸೇವಾ ಸಮಿತಿ ಅಧ್ಯಕ್ಷ ಎನ್.ಡಿ. ಕೃಷ್ಣಪ್ಪ ವಹಿಸಿದ್ದರು. ವೇದಿಕೆಯಲ್ಲಿ ಉದ್ಯಮಿಗಳಾದ ಬಿ.ಎಸ್. ಸುಂದರ್, ಬಿ.ಎಸ್. ಸದಾನಂದ್, ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಸಮಿತಿ ಪದಾಧಿಕಾರಿ ಸತೀಶ್, ತುಳುನಾಡ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಬೇಬಿ ಚಂದ್ರಹಾಸ್, ಕಾಂಗ್ರೆಸ್ ಹಿಂದುಳಿದ ವರ್ಗಗಳ ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಎಸ್.ಕೆ. ಸುಂದರ್, ಜೆಡಿಎಸ್‍ನ ಪವಿತ್ರಾ ದೇವೇಂದ್ರ ಉಪಸ್ಥಿತರಿದ್ದರು.

ಸಂಭ್ರಮಾಚರಣೆಯ ಅಂಗವಾಗಿ ಜನಾಂಗದವರಿಗಾಗಿ ಹಗ್ಗ ಜಗ್ಗಾಟ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.