ಕುಶಾಲನಗರ, ಆ. 19: ಪ್ರತಿಯೊಬ್ಬರೂ ವಚನಗಳ ತಿರುಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದು ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ವಚನ ಸಾಹಿತ್ಯ ಪರಿಷತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರಾವಣ ಸಾಹಿತ್ಯೋತ್ಸವ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದಲ್ಲಿನ ಅಸಮಾನತೆಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸ್ಥಾಪನೆಗೊಂಡ ಅನುಭವ ಮಂಟಪದ ಮೂಲಕ ಹಲವು ಸಾಮಾಜಿಕ ಕ್ರಾಂತಿಗಳು ಉಂಟಾಗಿವೆ. ಸಾರ್ವಕಾಲಿಕ ಮೌಲ್ಯಗಳನ್ನು ಒಳಗೊಂಡಿರುವ ವಚನಗಳ ಬಗ್ಗೆ ವಿದ್ಯಾರ್ಥಿಗಳು ಮನನ ಮಾಡಿ ಕೊಳ್ಳುವದು ಅವಶ್ಯಕ ಎಂದರು.

ಕೊಡಗು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ವಿ.ಪಿ.ಶಶಿಧರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕುಶಾಲನಗರ ಕನ್ನಡಭಾರತಿ ಪದವಿಪೂರ್ವ ಕಾಲೇಜು ಉಪನ್ಯಾಸಕ ರುದ್ರಾಚಾರ್ ಮುಖ್ಯ ಭಾಷಣ ಮಾಡಿದರು.

(ಮೊದಲ ಪುಟದಿಂದ) ಕೊಡಗು ಜಿಲ್ಲಾ ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಬಿಸಿಎಂ ಅಧಿಕಾರಿ ಕೆ.ವಿ.ಸುರೇಶ್, ವಸತಿ ಶಾಲಾ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ, ಸೋಮವಾರಪೇಟೆ ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಮಹದೇವಪ್ಪ ಇದ್ದರು.

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗಾಗಿ ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯ ಮುಖ್ಯ ಶಿಕ್ಷಕಿ ಮೇರಿ ಫಾತಿಮಾ ಅವರನ್ನು ಗೌರವಿಸಲಾಯಿತು.