ವೀರಾಜಪೇಟೆ, ಆ. 21: ವಿಧಾನ ಸಭಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನು ತಾ.22ರಂದು (ಇಂದು) ಬೆಳಿಗ್ಗೆ 10.30ಕ್ಕೆ ಗೊಣಿಕೊಪ್ಪದ ಆರ್.ಎಂ.ಸಿ ಸಭಾಂಗಣದಲ್ಲಿ ಕ್ಷೇತ್ರದ ಅಧ್ಯಕ್ಷ ಮನೆಯಪಂಡ ಬೆಳ್ಳಿಯ್ಯಪ್ಪರವರ ಅಧ್ಯಕ್ಷತೆಯಲ್ಲಿ ನಡೆಸಲು ನಿಶ್ಚಯಿಸಲಾಗಿದೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ವಿ.ಪಿ. ಲೋಹಿತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೆಡಿಎಸ್‍ನ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಸೆಪ್ಟಂಬರ್ 2ನೇ ವಾರದಲ್ಲಿ ಆಗಮಿಸಲಿದ್ದಾರೆ. ಅಂದಿನ ಸಮಾವೇಶದ ರೂಪುರೇಷೆಯ ಕುರಿತು ಮತ್ತು ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಲು ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ, ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು, ಕಾರ್ಯಕರ್ತರು ಸಭೆಗೆ ಭಾಗವಹಿಸಬೇಕೆಂದು ತಿಳಿಸಿದ್ದಾರೆ.