ಕೂಡಿಗೆ, ಆ. 21: ರಾಜ್ಯ ಬಿ.ಜೆ.ಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಅಧಿಕಾರದ ಪ್ರಭಾವವನ್ನು ಬಳಸಿ ಎ.ಸಿ.ಬಿ.ಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಕೂಡಿಗೆಯ ಪ್ರಮುಖ ಸರ್ಕಲ್‍ನಿಂದ ಕೂಡುಮಂಗಳೂರು ಸರ್ಕಲ್‍ವರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್, ತಾಲೂಕು ಅಧ್ಯಕ್ಷ ಕುಮಾರಪ್ಪ ಸೇರಿದಂತೆ ಪಕ್ಷದ ಕಾರ್ಯಕರ್ತರು ರಾಜ್ಯಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ಉಪಾಧ್ಯಕ್ಷ ಕೆ.ಕೆ.ಭೋಗಪ್ಪ, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೃಷ್ಣ, ಶಕ್ತಿ ಕೇಂದ್ರದ ಅಧ್ಯಕ್ಷ ಶಿವಾನಂದ, ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷ ಚಿಲ್ಲನ ಗಣಿಪ್ರಸಾದ್, ಒ.ಬಿ.ಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವರಾಜ್, ಎಸ್.ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ನಿಸಾರ್ ಅಹಮ್ಮದ್, ಆರ್.ಎಂ.ಸಿ ಮಾಜಿ ಅಧ್ಯಕ್ಷ ಎಂ.ಬಿ.ಜಯಂತ್, ಜಿ.ಪಂ. ಸದಸ್ಯೆ ಕೆ.ಆರ್. ಮಂಜುಳಾ, ತಾ.ಪಂ ಸzಸೆÀ್ಯ ಸಬಿತಾ ಚೆನ್ನಕೇಶವ, ಗಣೇಶ್, ಮುಳ್ಳುಸೋಗೆ ಗ್ರಾ.ಪಂ. ಅಧ್ಯಕ್ಷೆ ಭವ್ಯ ಸೇರಿದಂತೆ 3 ಗ್ರಾ.ಪಂ ವ್ಯಾಪ್ತಿಯ ಬಿ.ಜೆ.ಪಿ ಸದಸ್ಯರು ಹಾಗೂ ಕೂಡುಮಂಗಳೂರು ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್, ಯುವಮೋರ್ಚಾ ಅಧ್ಯಕ್ಷ ಶಶಿಕಿರಣ್, ಬಿ.ಜೆ.ಪಿ ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು.