ಕುಶಾಲನಗರ, ಆ. 22: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಮಡಿಕೇರಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‍ನ ಕೊಡಗು ಜಿಲ್ಲಾ ಸಮಿತಿ ಹಾಗೂ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬಸವನಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ರಾಮಾನುಜಂ ವಿಜ್ಞಾನ ಕೇಂದ್ರ ಹಾಗೂ ಇಕೋ-ಕ್ಲಬ್ ವತಿಯಿಂದ ‘ಪರಿಸರ ಸ್ನೇಹಿ ಗಣೇಶ ಉತ್ಸವ ಆಚರಣೆ’ ಕುರಿತು ಪರಿಸರ ಜಾಗೃತಿ ಆಂದೋಲನ ನಡೆಯಿತು. ‘ಪರಿಸರ ಸ್ನೇಹಿ ಗಣೇಶ ಉತ್ಸವ ಆಚರಣೆ’ ಅಂಗವಾಗಿ ಮಕ್ಕಳಿಗೆ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಕಾರ್ಯಕ್ರಮ ನಡೆಯಿತು. ಶಾಲೆಯ 46 ಮಕ್ಕಳು ಜೇಡಿಮಣ್ಣನ್ನು ಬಳಸಿ ಮಣ್ಣಿನ ಗಣೇಶ ಮೂರ್ತಿಗಳನ್ನು ತಯಾರಿಸಿದರು. ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಫಿಲಿಪ್‍ವಾಸ್ ಮಕ್ಕಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಈ ಸಂದರ್ಭ ಉಪಸ್ಥಿತರಿದ್ದ ‘ಹಸಿರೆಡೆಗೆ ನಡೆ-ಗ್ರೋ ಗ್ರೀನ್, ಗ್ರೀನ್ ಯಾತ್ರಾ’ ಹಾಗೂ ‘ಪರಿಸರ ಸ್ನೇಹಿ ಗಣೇಶ ಉತ್ಸವ ಆಚರಣೆ’ ಕುರಿತು ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿದರು.
ಪರಿಷತ್‍ನ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಇ. ಮೊಹಿದ್ದೀನ್, ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಬಿ.ಎಸ್. ಧನಪಾಲ್, ಇಕೋ-ಕ್ಲಬ್‍ನ ಸಂಚಾಲಕ ಶಿಕ್ಷಕ ಡಿ.ಎಸ್. ವೆಂಕಟೇಶ್, ಸುಂಟಿಕೊಪ್ಪ ಸರಕಾರಿ ಪಿಯು ಕಾಲೇಜಿನ ಉಪನ್ಯಾಸಕ ಎಸ್.ಹೆಚ್. ಈಶ, ಎಸ್‍ಡಿಎಂಸಿ ಅಧ್ಯಕ್ಷ ಕೆ.ಜಿ. ಸುಶೀಲ, ಶಾಲಾ ಮುಖ್ಯ ಶಿಕ್ಷಕ ಕೃಷ್ಣನಾಯಕ್, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಮೃತ್ಯುಂಜಯ, ವಿಜ್ಞಾನ ಪರಿಷತ್‍ನ ಸದಸ್ಯರಾದ ಎಸ್.ಟಿ. ವೆಂಕಟೇಶ್, ಸದಾಶಿವ ಎಸ್. ಪಲ್ಲೇದ್, ಶಿಕ್ಷಕರಾದ ಎ.ಎ. ಲಕ್ಷ್ಮಣ್, ಶ್ರೀನಿವಾಸ್ ನಾಯಕ್, ವಿಜಯಲಕ್ಷ್ಮಿ, ಲತಾ ಮತ್ತಿತರರು ಇದ್ದರು.
ವಿದ್ಯಾರ್ಥಿಗಳು ಪರಿಸರ ಸ್ನೇಹಿ ಗಣೇಶೋತ್ಸವ ಕುರಿತಂತೆ ಪರಿಸರ ಘೋಷಣೆಗಳನ್ನು ಒಳಗೊಂಡ ಭಿತ್ತಿಫಲಕಗಳನ್ನು ಹಿಡಿದು ಪರಿಸರ ಘೋಷಣೆ ಕೂಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.