ಸಿದ್ದಾಪುರ, ಆ. 23 : ನೆಲ್ಯಹುದಿಕೇರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಅರ್ಹ ಮಹಿಳೆಯರಿಗೆ ಉಚಿತ ಅಡುಗೆ ಅನಿಲ ವಿತರಿಸಲಾಯಿತು.
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ನೆಲ್ಯಹುದಿಕೇರಿ ಗ್ರಾಮದ 26 ಅರ್ಹ ಪಲಾನುಭವಿಗಳಿಗೆ ಅಡುಗೆ ಅನಿಲ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಬಿ.ಜೆ.ಪಿಯ ನೆಲ್ಯಹುದಿಕೇರಿ ಗ್ರಾಮದ ವಿಸ್ತಾರಕ್ ಸೋಮೇಶ್ ಮಾತನಾಡಿ ಕೇಂದ್ರದಲ್ಲಿ ಬಿ.ಜೆ.ಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಲ್ಲದೆ, ಇದೀಗ ಬಡ ವರ್ಗದ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ನೀಡುವ ಮೂಲಕ ಸಮಾಜದಲ್ಲಿ ಬಡಕುಟುಂಬಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಿ.ಜೆ.ಪಿ ಮುಖಂಡ ಹೊಸಮನೆ ವಸಂತ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರವು ಬಡವರ್ಗದ ಜನರಿಗಾಗಿ ಅನೇಕ ಸೌಲಭ್ಯಗಳನ್ನು ಜಾರಿಗೆ ತಂದಿದ್ದು, ಇದರ ಸದುಪಯೋಗವನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು. ಮೋದಿ ಪ್ರಧಾನ ಮಂತ್ರಿಯಾದ ಬಳಿಕ ಬಡವರಿಗೆ ಜನ್ ಧನ್ ಯೋಜನೆ, ಮುದ್ರಾ ಯೋಜನೆ, ದೀನ್ ದಯಾಳ್ ವಿದ್ಯುತ್ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಎಲ್ಲ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದÀರ್ಭ ನೆಲ್ಯಹುದಿಕೇರಿ ಗ್ರಾ.ಪಂ. ಉಪಾಧ್ಯಕ್ಷೆ ಸಫಿಯಾ, ಸದಸ್ಯರುಗಳಾದ ಶಶಿ, ಶೈಲಾ, ಬಿಂದು, ಮೈನಾ, ಮರಿಯಾ, ಇಂದಿರಾ, ಬಿ.ಜೆ.ಪಿ. ಸ್ಥಾನೀಯ ಸಮಿತಿ ಅಧ್ಯಕ್ಷ ó ಷಾಜಿ, ಕಾರ್ಯದರ್ಶಿ ಮಂಜು, ಬಿ.ಜೆ.ಪಿ. ಮುಖಂಡರುಗಳಾದ ನಿಸಾರ್ ಅಹಮದ್, ಸುರೇಶ್, ಟಿ.ಸಿ. ಅಶೋಕ್, ಟಿ.ಆರ್. ಮಣಿ ಮತ್ತಿತರರು ಹಾಜರಿದ್ದರು.