ನಾಪೆÇೀಕ್ಲು, ಆ. 24: ಬಲ್ಲಮಾವಟಿ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾಗಿದ್ದು ಶಿಕ್ಷಕರನ್ನು ನೇಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಬಲ್ಲಮಾವಟಿ ಪಿಂಚಣಿದಾರರ ಸಂಘದ ಕಟ್ಟಡದಲ್ಲಿ ನಡೆದ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಾತನಾಡಿದ ಗ್ರಾಮಸ್ಥರು ಶಾಲೆಗಳಿಗೆ ಕ್ಷೀರಭಾಗ್ಯ, ಸೈಕಲ್‍ಭಾಗ್ಯ, ಸೇರಿದಂತೆ ಹತ್ತು ಹಲವು ಯೋಜನೆಗಳ ಜಾರಿ ಮಾಡುವ ಇಲಾಖೆ ಶಿಕ್ಷಕರನ್ನು ಒದಗಿಸಲು ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಅಂಗನವಾಡಿ ಕೇಂದ್ರ ನಿರ್ಮಾಣಗೊಳ್ಳಲು ಆರಂಭವಾಗಿ ಐದಾರು ವರ್ಷಗಳು ಕಳೆದರೂ ಪೂರ್ಣಗೊಂಡಿಲ್ಲ. ರಸ್ತೆ ಬದಿಯಲ್ಲಿನ ವಿದ್ಯುತ್ ಕಂಬಗಳಿಂದಾಗಿ ಸಂಚಾರಕ್ಕೆ ತೊಡಕುಂಟಾಗಿದೆ. ಪಂಚಾಯಿತಿ ಮುಂದೆ ಬ್ಯಾರಿಕೇಡ್ ನಿರ್ಮಿಸುವ ಅಗತ್ಯವಿದೆ ಎಂದು ಒತ್ತಾಯಿಸಿದರು.

ಗ್ರಾಮಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಗಳಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ನೋಡಲ್ ಅಧಿಕಾರಿಯಾಗಿ ಪಾಲ್ಗೊಂಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಸುಮಯ್ಯ, ತೋಟಗಾರಿಕಾ ಇಲಾಖೆಯ ರಾಮದಾಸ್, ಕೃಷಿ ಇಲಾಖೆಯ ಜಯರಾಂ, ಇಂಜಿನಿಯರ್ ಅಶೋಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹೇಮಾವತಿ ಇಲಾಖೆಯಿಂದ ಸಾರ್ವಜನಿಕರಿಗೆ ನೀಡಲಾಗುವ ಸವಲತ್ತುಗಳ ಬಗ್ಗೆ ವಿವರಿಸಿದರು.

ಬಲ್ಲಮಾವಟಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಕರವಂಡ ಸರಸು ಪೆಮ್ಮಯ್ಯ, ಸಭೆಯ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯೆ ಕೋಡಿಯಂಡ ಇಂದಿರಾ ಹರೀಶ್ ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ದೇವಕ್ಕಿ, ಸದಸ್ಯರಾದ ಬೈರುಡ ಮುತ್ತಪ್ಪ, ಚಂಗೇಟಿರ ಕುಮಾರ್‍ಸೊಮಣ್ಣ ಇದ್ದರು. ಪಿಡಿಒ ವೀಣಾಕುಮಾರಿ ಸ್ವಾಗತಿಸಿ ವಂದಿಸಿದರು.