ಮಡಿಕೇರಿ, ಆ. 26 : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್‍ನ ಕಾರ್ಯಕಾರಿ ಸಮಿತಿಯ ಸಭೆ ತಾ.28 ರಂದು (ನಾಳೆ) ಬೆಳಗ್ಗೆ 11 ಗಂಟೆಗೆ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕೆÀ್ಷ ಜಿ.ಆರ್. ಪುಷ್ಪಲತಾ ತಿಳಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಮಹಿಳಾ ಘಟಕದ ಪದಾಧಿಕಾರಿಗಳು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು,

ಕೆಪಿಸಿಸಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲೆಯ ಹಿರಿಯ ಮಹಿಳಾ ಮುಖಂಡರುಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳು ಸಭೆಯಲ್ಲಿ ಭಾಗವಹಿಸುವಂತೆ ಪುಷ್ಪಲತಾ ತಿಳಿಸಿದ್ದಾರೆ.