ಮಡಿಕೇರಿ, ಆ. 29: ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತಾ. 31 ರಂದು (ನಾಳೆ) ಬೆಳಿಗ್ಗೆ 10.30 ಗಂಟೆಗೆ ಕೂಡಿಗೆ ಕ್ರೀಡಾಶಾಲೆಯ ಆಟದ ಮೈದಾನದಲ್ಲಿ 2017-18ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಯೋಜನೆ ಮತ್ತು ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಮೀನುಗಾರಿಕೆ ಸಚಿವ ಪ್ರಮೋದ್ ಮದ್ವರಾಜ್, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದÀ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಪಿ. ಶಶಿ ಸುಬ್ರಮಣಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ವಿಜು ಸುಬ್ರಮಣಿ, ಮಡಿಕೇರಿ ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ನಗರಸಭೆ ಅಧಕ್ಷೆÀ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಇತರರು ಪಾಲ್ಗೊಳ್ಳಲಿದ್ದಾರೆ.