ವೀರಾಜಪೇಟೆ, ಆ. 29: ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪೂರ್ಣ ಬೆಂಬಲ ನೀಡುವಂತೆ ನಿರ್ಣಯ ಅಂಗೀಕರಿಸಿತು.

ಇಲ್ಲಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಡಿ.ಐ ಏಜಾಜ್ ಅಹಮ್ಮದ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಬ್ದುಲ್ ಸಲಾಂ ಜಾತ್ಯತೀತವಾಗಿ ಪಕ್ಷವನ್ನು ಬಲಿಷ್ಠ ಸಂಘಟನೆಯತ್ತ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ. ಮುಂದಿನ ವಿಧಾನಸಭಾ ಕ್ಷೇತ್ರದ ಪಕ್ಷದ ಚುನಾವಣೆ ಇವರ ನೇತೃತ್ವದಲ್ಲಿಯೇ ನಡೆಯಬೇಕು ಎಂದು ಸಭೆ ತೀರ್ಮಾನಿಸಿತು.

ಪಕ್ಷದ ಗುಂಪೊಂದು ಸಲಾಂ ವಿರುದ್ದ ಸಾಕ್ಷ್ಯಾಧಾರಗಳಿಲ್ಲದ ಆರೋಪ ಮಾಡುತ್ತಿದ್ದಾರೆ. ಇತ್ತೀಚೆಗೆ ವೀರಾಜಪೇಟೆಯಲ್ಲಿ ನಡೆದ ಪಕ್ಷದÀ ಸಭೆಯಲ್ಲಿ ವರಿಷ್ಠರ ಮುಂದೆ ಕೆಲವು ಕಾರ್ಯಕರ್ತರ ವರ್ತನೆಯನ್ನು ಸಭೆ ಖಂಡಿಸುತ್ತದೆ. ಇದರಿಂದ ಪಕ್ಷದ ಸಂಘಟನೆಗೆ ಚ್ಯುತಿ ಬರಲಿದೆ ಎಂದು ಸಭೆಯಲ್ಲಿ ಕೆಲವರು ದೂರಿದರು. ಇವರ ಬಗ್ಗೆಯೂ ಪಕ್ಷದ ವರಿಷ್ಠರಿಗೆ ಪಕ್ಷದ ಅಲ್ಪಸಂಖ್ಯಾತರ ಘಟಕದಿಂದ ಲಿಖಿತ ದೂರು ನೀಡುವಂತೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಅಬ್ದುಲ್ ರೆಹಮಾನ್ ಬಾಪು, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಎಡಪಾಲ ಬಶೀರ್, ಜಿಲ್ಲಾ ಸಮಿತಿ ಉಪಾಧ್ಯಕ್ಷ ಪೋಕುಟ್ಟಿ ಹಾಜಿ, ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಎರಟಂಡ ಮುಸ್ತಾಫ, ಪಟ್ಟಣ ಪಂಚಾಯಿತಿ ನಾಮ ನಿರ್ದೇಶನ ಸದಸ್ಯ ಮಹಮ್ಮದ್ ರಾಫಿ, ವೀರಾಜಪೇಟೆ ಬ್ಲಾಕ್ ಉಪಾಧ್ಯಕ್ಷ ಪಿ.ಎ. ಹನೀಫ್, ಮಕ್ಕಿ ನಾಸಿರ್, ಜುಬೇರ್, ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಶಾಫಿ, ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಂದಾಯ್, ತಾಲೂಕಿನ ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.