ಮಡಿಕೇರಿ, ಆ. 29: ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ದೇಶಪ್ರೇಮ ಕಡಿಮೆಯಾಗುತ್ತಿದ್ದು, ಯುವಜನರು ದೇಶಪ್ರೇಮವನ್ನು ಬೆಳೆಸಿಕೊಳ್ಳುವ ಮೂಲಕ ದೇಶರಕ್ಷಣೆಗೆ ಮುಂದಾಗಬೇಕೆಂದು ಅಡ್ಡಂಡ ಸಿ. ಕಾರ್ಯಪ್ಪ ಅಭಿಪ್ರಾಯಪಟ್ಟರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವೀರಾಜಪೇಟೆಯಲ್ಲಿ ನಡೆದ 2017-18ನೇ ಸಾಲಿನ ವಿದ್ಯಾರ್ಥಿ ಸಮಿತಿ ಮತ್ತು ಪಠ್ಯೇತರ ಚಟುವಟಿಕೆ ಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಕ್ರೀಡೆ ಮತ್ತು ಸಾಂಸ್ಕøತಿಕ ಪ್ರತಿಭೆಯನ್ನು ವ್ಯಕ್ತಪಡಿಸಲು ವಿದ್ಯಾರ್ಥಿಗಳು ಮನಸು ಮಾಡಿದರೆ ಮಾತ್ರ ನಾಟಕ, ಚಲನಚಿತ್ರ ಮುಂತಾದವುಗಳಲ್ಲಿ ಭಾಗವಹಿಸಲು ಅವಕಾಶಗಳು ಒದಗಿ ಬರುತ್ತದೆ. ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯರವರನ್ನು ನೆನೆದು ಕೊಳ್ಳುತ್ತ ವಿದ್ಯಾರ್ಥಿಗಳು ಶಿಸ್ತನ್ನು ಮೈಗೂಡಿಸಿಕೊಳ್ಳುವದ ರೊಂದಿಗೆ ದೇಶ ರಕ್ಷಣೆಯ ಕಾರ್ಯವನ್ನು ಮಾಡಲು ಎಲ್ಲರೂ ಸದಾ ಸಿದ್ಧರಾಗಿರ ಬೇಕು ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಂತರ್ರಾಷ್ಟ್ರೀಯ ಹಾಕಿ ತೀರ್ಪುಗಾರ್ತಿ ಅನುಪಮ ಮಂದಣ್ಣ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿ ಕ್ರೀಡಾ ಚಟುವಟಿಕೆಯಲ್ಲಿ ಯಾವದೇ ಅಂಜಿಕೆಯಿಲ್ಲದೆ ಭಾಗವಹಿಸಿದರೆ ಮಾತ್ರ ರಾಜ್ಯ, ರಾಷ್ಟ್ರ ಮತ್ತು ಅಂತರ್ರಾಷ್ಟ್ರೀಯ ಮಟ್ಟಕ್ಕೆ ತಲುಪಲು ಸಾಧ್ಯವಾಗುತ್ತದೆ. ಇದಕ್ಕೆ ತಾನೇ ಉತ್ತಮ ಉದಾಹರಣೆ ಎಂದು ಹೇಳುವದರ ಮೂಲಕ ಪ್ರತಿಯೊಬ್ಬ ಹೆಣ್ಣು ಮಗಳು ದೈರ್ಯದಿಂದ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಂಡು ದೇಶವನ್ನು ಪ್ರತಿನಿಧಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ ಮಾತನಾಡಿ ಪಾಠ ಮತ್ತು ಪಠ್ಯೇತರ ಚಟುವಟಿಕೆ ಯನ್ನು ಸರಿಸಮಾನವಾಗಿ ತೆಗೆದು ಕೊಂಡು ವಿದ್ಯಾರ್ಥಿ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳ ಬೇಕು ಎಂದು ಹಿತವಚನ ನುಡಿದರು. ಕಾಲೇಜಿನ ಕಾರ್ಯಾಧ್ಯಕ್ಷ ಮೂಕೊಂಡ ಬೋಸ್ ದೇವಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಸಾಂಸ್ಕøತಿಕ ಸಮಿತಿಯ ಸಂಚಾಲಕಿ ಪ್ರೊ. ಸುನಿತ ಎಂ.ಎಂ. ಮತ್ತು ಕ್ರೀಡಾ ಸಮಿತಿಯ ಸಂಚಾಲಕಿ ಪ್ರೊ. ರಾಖಿ ಪೂವಣ್ಣ ಎಂ. ಉಪಸ್ಥಿತರಿದ್ದರು. ನಿರೂಪಣೆಯನ್ನು ಅಂತಿಮ ಬಿ.ಎ ವಿದ್ಯಾರ್ಥಿನಿಯರಾದ ಕಾವೇರಮ್ಮ ಮತ್ತು ಗಂಗಾವತಿ, ಸ್ವಾಗತವನ್ನು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ವನಿತ್‍ಕುಮಾರ್ ಎಂ.ಎನ್, ವಂದನಾರ್ಪಣೆಯನ್ನು ಕಾಲೇಜಿನ ಇತಿಹಾಸ ವಿಭಾಗದ ಉಪನ್ಯಾಸಕ ಸತೀಶ್ ಕುಮಾರ್ ಎ.ಎಸ್. ನೆರವೇರಿಸಿಕೊಟ್ಟರು.